ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಆಗಿ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಪುನೀತ್ ರಾಜ್ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ಮಾರ್ಚ್ 14ರಂದು ಮರುಬಿಡುಗಡೆ ಆಗುತ್ತಿದೆ. ಈ ಸಿನಿಮಾದ ‘ಆ ದೇವರ ಹಾಡಿದು..’ ಹಾಗೂ ‘ಎಲ್ಲಿಂದ ಆರಂಭವೋ..’ ಹಾಡುಗಳನ್ನು ಬರೆದ ಕೆ. ಕಲ್ಯಾಣ್ ಅವರು ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಒಡನಾಟವನ್ನು ಕಲ್ಯಾಣ್ ಅವರು ನೆನಪು ಮಾಡಿಕೊಂಡಿದ್ದಾರೆ.
‘ಅಪ್ಪು’ ಸಿನಿಮಾ ಮರು ಬಿಡುಗಡೆ ಆಗುತ್ತಿರುವ ಸಮಯದಲ್ಲಿ ಗೀತರಚನಕಾರ ಕೆ. ಕಲ್ಯಾಣ್ ಅವರು ಪುನೀತ್ ರಾಜ್ಕುಮಾರ್ (Puneeth Rajkumar) ಬಗ್ಗೆ ಮಾತನಾಡಿದ್ದಾರೆ. ‘ಪುನೀತ್ ರಾಜ್ಕುಮಾರ್ ಅವರದ್ದು ಆದರ್ಶ ವ್ಯಕ್ತಿತ್ವ. ಯಾರ ಬಗ್ಗೆಯೂ ಅವರು ನೆಗೆಟಿವ್ ಆಗಿ ಮಾತನಾಡಿದ್ದನ್ನು ನಾನು ಕೇಳಿಯೇ ಇಲ್ಲ. ಯಾವ ಗಾಸಿಪ್ಗಳು, ಕೆಟ್ಟ ಸುದ್ದಿಗಳು ಅವರ ಸುತ್ತ ಸುಳಿಯುತ್ತಲೇ ಇರಲಿಲ್ಲ. ಅಷ್ಟು ಶುದ್ಧವಾದ ಮನಸ್ಸು ಅವರದ್ದು’ ಎಂದು ಕೆ. ಕಲ್ಯಾಣ್ (K Kalyan) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 12, 2025 08:25 PM
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
