ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಆಗಿ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್

Edited By:

Updated on: Mar 12, 2025 | 9:44 PM

ಪುನೀತ್ ರಾಜ್​ಕುಮಾರ್​ ನಟನೆಯ ‘ಅಪ್ಪು’ ಸಿನಿಮಾ ಮಾರ್ಚ್​ 14ರಂದು ಮರುಬಿಡುಗಡೆ ಆಗುತ್ತಿದೆ. ಈ ಸಿನಿಮಾದ ‘ಆ ದೇವರ ಹಾಡಿದು..’ ಹಾಗೂ ‘ಎಲ್ಲಿಂದ ಆರಂಭವೋ..’ ಹಾಡುಗಳನ್ನು ಬರೆದ ಕೆ. ಕಲ್ಯಾಣ್ ಅವರು ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರ ಒಡನಾಟವನ್ನು ಕಲ್ಯಾಣ್ ಅವರು ನೆನಪು ಮಾಡಿಕೊಂಡಿದ್ದಾರೆ.

‘ಅಪ್ಪು’ ಸಿನಿಮಾ ಮರು ಬಿಡುಗಡೆ ಆಗುತ್ತಿರುವ ಸಮಯದಲ್ಲಿ ಗೀತರಚನಕಾರ ಕೆ. ಕಲ್ಯಾಣ್ ಅವರು ಪುನೀತ್ ರಾಜ್​ಕುಮಾರ್​ (Puneeth Rajkumar) ಬಗ್ಗೆ ಮಾತನಾಡಿದ್ದಾರೆ. ‘ಪುನೀತ್ ರಾಜ್​ಕುಮಾರ್​ ಅವರದ್ದು ಆದರ್ಶ ವ್ಯಕ್ತಿತ್ವ. ಯಾರ ಬಗ್ಗೆಯೂ ಅವರು ನೆಗೆಟಿವ್ ಆಗಿ ಮಾತನಾಡಿದ್ದನ್ನು ನಾನು ಕೇಳಿಯೇ ಇಲ್ಲ. ಯಾವ ಗಾಸಿಪ್​ಗಳು, ಕೆಟ್ಟ ಸುದ್ದಿಗಳು ಅವರ ಸುತ್ತ ಸುಳಿಯುತ್ತಲೇ ಇರಲಿಲ್ಲ. ಅಷ್ಟು ಶುದ್ಧವಾದ ಮನಸ್ಸು ಅವರದ್ದು’ ಎಂದು ಕೆ. ಕಲ್ಯಾಣ್ (K Kalyan) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 12, 2025 08:25 PM
Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More