NityaBhavishya: ಸೋಮವಾರದ ದ್ವಾದಶ ರಾಶಿಗಳ ಶುಭ ಫಲ ಹೇಗಿದೆ?

|

Updated on: Apr 03, 2023 | 6:29 AM

ಸೋಮವಾರ ಏಪ್ರಿಲ್​ 03​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಶುಭೋದಯ ಓದುಗರೇ, ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಏಪ್ರಿಲ್​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಗಂಡ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ 07:59 ರಿಂದ 09:32ರ ವರೆಗೆ, ಯಮಘಂಡ ಕಾಲ 11:04 ರಿಂದ 12:36ರ ವರೆಗೆ, ಗುಳಿಕ ಕಾಲ 02:08ರಿಂದ 03:40ರ ವರೆಗೆ.

Published on: Apr 03, 2023 06:29 AM