ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿಯಲ್ಲಿ ತೀರದ ನಿವಾಸಿಗಳು

Updated on: May 22, 2025 | 9:21 AM

ಪ್ರತಿ ವರ್ಷದಂತೆ ಮುಂಗಾರು ಸಮೀಪಿಸುತ್ತಿದ್ದಂತೆಯೇ ಕರವಾಳಿ ಕರ್ನಾಟಕದ ಜನತೆ ಈ ವರ್ಷವೂ ಕಡಲ್ಕೊರೆತದ ಭೀತಿಯಿಂದ ಕಂಗಾಲಾಗಿದ್ದಾರೆ. ಮಂಗಳೂರು ಹಾಗೂ ಉಡುಪಿ ಸಮುದ್ರ ತೀರ ಪ್ರದೇಶಗಳಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಸಮುದ್ರ ತೀರದ ನಿವಾಸಿಗಳ ಎದೆಬಡಿತ ಹೆಚ್ಚಿಸಿದೆ. ಸದ್ಯದ ಪರಿಸ್ಥಿತಿ ಹೇಗಿದೆ ಎಂಬ ವಿವರ ಇಲ್ಲಿದೆ.

ಮಂಗಳೂರು, ಮೇ 22: ನೈಋತ್ಯ ಮುಂಗಾರು ಮಾರುತಗಳ ಆಗಮನಕ್ಕೆ ದಿನಗಣನೆ ಆರಂಭವಾಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮವಾಗಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ರಕ್ಕಸಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಅನೇಕ ತೀರ ಪ್ರದೇಶಗಳಲ್ಲಿ ಕಡಲ್ಕೊರೆತದ ಭೀತಿ ಹೆಚ್ಚಾಗಿದ್ದು, ಜನರನ್ನು ಆತಂಕ್ಕೀಡುಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ