ಡಿಕೆ ಶಿವಕುಮಾರ್ ಜತೆ 40-60 ಶಾಸಕರು? ಸಚಿವ ಜಮೀರ್ ಅಚ್ಚರಿಯ ಹೇಳಿಕೆ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತ ಗೊಂದಲಗಳ ನಡುವೆ, ಡಿ.ಕೆ. ಶಿವಕುಮಾರ್ ಪರ 60 ಶಾಸಕರು ಸಹಿ ಸಂಗ್ರಹ ಮಾಡಿದ್ದಾರೆ ಎಂಬ ವರದಿಗಳನ್ನು ಸಚಿವ ಜಮೀರ್ ಅಹ್ಮದ್ ಖಾನ್ ನಿರಾಕರಿಸಿದ್ದಾರೆ. ಯಾವುದೇ ಶಾಸಕರ ಸಹಿ ಸಂಗ್ರಹಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಿಜೆಪಿಯ ಕುದುರೆ ವ್ಯಾಪಾರದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಜಮೀರ್ ಒತ್ತಿ ಹೇಳಿದ್ದಾರೆ.
ಬೆಂಗಳೂರು, ನವೆಂಬರ್ 25: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ, ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪವನ್ನು ಸಚಿವ ಜಮೀರ್ ಅಹ್ಮದ್ ಅಲ್ಲಗಳೆದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುದುರೆ ವ್ಯಾಪಾರ ಎಂಬುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. 2008ರಿಂದ ಕರ್ನಾಟಕದಲ್ಲಿ ಬಹುಮತ ಸಿಗದೆ ಅವರು ಆಪರೇಷನ್ ಕಮಲದ ಮೂಲಕವೇ ಸರ್ಕಾರ ರಚಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಯಾವುದೇ ಬೆಳವಣಿಗೆ ಇಲ್ಲ ಎಂದಿದ್ದಾರೆ. ಅಲ್ಲದೆ, ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 60 ಶಾಸಕರು ಸಹಿ ಹಾಕಿದ್ದಾರೆ ಎಂಬ ವರದಿಗಳನ್ನು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

