AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು

ರಾಮ್​, ಮೈಸೂರು
| Edited By: |

Updated on:Dec 26, 2025 | 2:01 PM

Share

Mysuru Blast: ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ವ್ಯಾಪಾರಿಗಳ ಮೇಲೆ ನಿಗಾ ಇರಿಸುವ ಮತ್ತು ಅಪಾಯಕಾರಿ ರಾಸಾಯನಿಕಗಳ ಬಳಕೆಯನ್ನು ನಿಷೇಧಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮೈಸೂರು, ಡಿಸೆಂಬರ್ 28: ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್​.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದು, ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು. ಸೀಸನಲ್ ವ್ಯಾಪಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ವ್ಯವಸ್ಥೆ ರೂಪಿಸಲಾಗಿದ್ದು, ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಬಲೂನ್ ತಯಾರಿಸುವುದನ್ನು ನಿಷೇಧಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮಿ ಮತ್ತು ಮಂಜುಳಾ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಕೊಟ್ರೇಶ್ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿಸಿದರು. ಎಲ್ಲಾ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 26, 2025 02:00 PM