ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ

Edited By:

Updated on: Apr 24, 2026 | 11:24 AM

ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದ್ದು, ಇದಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಗಳ ಮನಸ್ಸಿಗೆ ನೋವುಂಟು ಮಾಡಿದ್ದು, ಧಾರ್ಮಿಕ ಆಚರಣೆಗೆ ಧಕ್ಕೆ ತಂದಿದೆ ಎಂದು ಪೋಷಕರು ದೂರಿದ್ದಾರೆ.

ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆಸುವಂತೆ ಸೂಚಿಸಿದ್ದಾರೆ. ಜನಿವಾರ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದಾಗ, ಅವರನ್ನು ಪರೀಕ್ಷೆಗೆ ಕೂರಲು ಬಿಡುವುದಿಲ್ಲ ಎಂದು ಹೇಳಿ ಮನೆಗೆ ಕಳುಹಿಸುವ ಬೆದರಿಕೆ ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಧಾರ್ಮಿಕ ಆಚರಣೆಯ ಭಾಗವಾಗಿರುವ ಜನಿವಾರ ತೆಗೆಸುವ ಕ್ರಮವು ಧಾರ್ಮಿಕ ಹಕ್ಕಿಗೆ ಧಕ್ಕೆ ತಂದಿದೆ ಎಂದು ಪೋಷಕರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಘಟನೆಗಳು ಹಿಂದೂ ವಿರೋಧಿ ನೀತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಕೆಲ ಪೋಷಕರು ಸರ್ಕಾರವನ್ನು ದೂಷಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 24, 2026 11:21 AM
Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More