ಟಿವಿಯಲ್ಲಿ ಬರ್ತಿದೆ ‘45’ ಸಿನಿಮಾ; ಯಾವಾಗ? ಎಲ್ಲಿ?

Updated on: Feb 18, 2026 | 11:32 AM

ಅರ್ಜುನ್ ಜನ್ಯ ನಿರ್ದೇಶನ ಮಾಡಿರೋ ಮೊದಲ ಸಿನಿಮಾ ‘45’. ಈ ಚಿತ್ರ ಆರ್ಥಿಕವಾಗಿ ಅಷ್ಟು ಲಾಭ ಕಂಡಿಲ್ಲ ಎಂದು ಹೇಳಲಾಗುತ್ತಾ ಇದೆ. ಹೀಗಿರುವಾಗಲೇ ಟಿವಿಯಲ್ಲಿ ಈ ಸಿನಿಮಾ ಪ್ರಸಾರ ಕಾಣಲು ರೆಡಿ ಆಗಿದೆ. ಹಾಗಾದರೆ ಯಾವಾಗ ಆ ಸಿನಿಮಾ ಪ್ರಸಾರ ಕಾಣಲಿದೆ? ಆ ಬಗ್ಗೆ ಇಲ್ಲಿದೆ ವಿವರ.

ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ರಾಜ್ ಬಿ ಶೆಟ್ಟಿ, ಉಪೇಂದ್ರ ಹಾಗೂ ಶಿವರಾಜ್​​ಕುಮಾರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಥಿಯೇಟರ್​​​ನಲ್ಲಿ ಡಿಸೆಂಬರ್ 25ರಂದು ತೆರೆಗೆ ಬಂತು. ಆ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಟಿವಿಯಲ್ಲಿ ಪ್ರಸಾರ ಕಾಣುವ ಸಮಯ. ಫೆಬ್ರವರಿ 22 (ಭಾನುವಾರ )ಸಂಜೆ 4:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಕಿರುತೆರೆ ಪ್ರೇಕ್ಷಕರು ಈ ಸಿನಿಮಾನ ವೀಕ್ಷಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More