‘ರಾಜಮಾರ್ತಾಂಡ’ ಚಿತ್ರಕ್ಕೆ ವಿಶ್ ಮಾಡಿದ ನಟ ಅರ್ಜುನ್ ಸರ್ಜಾ

Updated on: Oct 05, 2023 | 2:59 PM

ಚಿರಂಜೀವಿ ಸರ್ಜಾ ನಟನೆಯ ‘ರಾಜಮಾರ್ತಾಂಡ’ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗುತ್ತಿದೆ. ಅವರು ಇಲ್ಲ ಎಂಬ ನೋವಿನಲ್ಲೇ ಅಭಿಮಾನಿಗಳು ಸಿನಿಮಾ ವೀಕ್ಷಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಸರ್ಜಾ ಅವರು ವಿಶ್ ಮಾಡಿದ್ದಾರೆ.

ಚಿರಂಜೀವಿ ಸರ್ಜಾ (Chiranjeevi Sarja) ನಟನೆಯ ‘ರಾಜಮಾರ್ತಾಂಡ’ ಸಿನಿಮಾ ಅಕ್ಟೋಬರ್ 6ರಂದು ರಿಲೀಸ್ ಆಗುತ್ತಿದೆ. ಅವರು ಇಲ್ಲ ಎಂಬ ನೋವಿನಲ್ಲೇ ಅಭಿಮಾನಿಗಳು ಸಿನಿಮಾ ವೀಕ್ಷಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಸರ್ಜಾ ಅವರು ವಿಶ್ ಮಾಡಿದ್ದಾರೆ. ‘ನಮ್ಮ ಮನೆಯ ರಾಜಕುಮಾರ್, ನಿಮ್ಮೆಲ್ಲರ ಪ್ರೀತಿಯ ಚಿರು ಸರ್ಜಾ ನಟಿಸಿದ ಚಿತ್ರ ರಾಜಮಾರ್ತಾಂಡ ಬಿಡುಗಡೆಗೆ ಆಗುತ್ತಿದೆ. ತಂಡದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಚಿರು-ಧ್ರುವ ಒಟ್ಟಿಗೆ ನಟಿಸಬೇಕು ಎನ್ನುವ ಆಸೆ ಇತ್ತು. ಆದರೆ, ಅದು ಆಗಿಲ್ಲ. ಆದರೆ, ಈ ಚಿತ್ರದ ಮೂಲಕ ಕನಸು ಈಡೇರುತ್ತಿದೆ. ಚಿರು ಅಭಿನಯಕ್ಕೆ ತಮ್ಮನ ಧ್ವನಿ ಇರುತ್ತದೆ. ಇಬ್ಬರನ್ನೂ ನೋಡಿದಂತಾಗುತ್ತದೆ’ ಎಂದಿದ್ದಾರೆ ಅರ್ಜುನ್ ಸರ್ಜಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More