PM Modi in US: ಪ್ರಧಾನಿ ನರೇಂದ್ರ ಮೋದಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಗೆ ನೀಡಿದ ಉಡುಗೊರೆಗಳಲ್ಲಿ ಕರ್ನಾಟಕದ ಶ್ರೀಗಂಧ ಪೆಟ್ಟಿಗೆ ಸೇರಿದೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jun 22, 2023 | 10:39 AM

ಪ್ರಧಾನಿ ಮೋದಿ ಯಾವುದೇ ದೇಶಕ್ಕೆ ಪ್ರವಾಸ ಹೋದರೂ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಉಡುಗೊರೆಗಳನ್ನು ಆಯಾ ದೇಶಗಳ ಗಣ್ಯರಿಗೆ ನೀಡುತ್ತಾರೆ.

ಬೆಂಗಳೂರು: ಯುಎಸ್ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ (PM Narendra Modi) ಎಂದಿನಂತೆ ಭವ್ಯ ಸ್ವಾಗತ ಸಿಕ್ಕಿದೆ. ಅಲ್ಲಿನ ಅಧ್ಯಕ್ಷ ಜೋ ಬೈಡೆನ್ (Joe Biden) ಮತ್ತು ಪ್ರಧಾನಿ ಮೋದಿ ನಡುವೆ ಉತ್ತಮ ಬಾಂಧವ್ಯ ಇದೆ. ಮೋದಿ ಯಾವುದೇ ದೇಶಕ್ಕೆ ಪ್ರವಾಸ ಹೋದರೂ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಉಡುಗೊರೆಗಳನ್ನು ಆಯಾ ದೇಶಗಳ ಗಣ್ಯರಿಗೆ ನೀಡುತ್ತಾರೆ. ಈ ಬಾರಿಯೂ ಅವರು ಕರ್ನಾಟಕದ ಶ್ರೀಗಂಧ ಮರದ ಕಟ್ಟಿಗೆಯಿಂದ ತಯಾರಿಸಿರುವ ಗಂಧದ ಪರಿಮಳದಿಂದ ಘಮಘಮಿಸುವ ಪೆಟ್ಟಿಗೆ (sandalwood box) ಜೊತೆಗೆ ಬೇರೆ ಹಲವು ಉಡುಗೊರೆಗಳನ್ನು ಬೈಡೆನ್ ಮತ್ತು ಅವರ ಪತ್ನಿಗೆ ನೀಡಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿರುವ ವ್ಹೈಟ್ ಹೌಸ್ ನಲ್ಲಿ ಪ್ರಧಾನಿ ಮೋದಿ ಯುಎಸ್ ಪ್ರಥಮ ಪ್ರಜೆ ಹಾಗೂ ಅವರ ಪತ್ನಿಗೆ ಗಿಫ್ಟ್ ಗಳ ಜೊತೆಗೆ ಅವುಗಳ ವಿವರಣೆ ನೀಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.