ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪಿಠೋಪಕರಣಗಳ ವ್ಯವಸ್ಥೆ ಮಾಡಿ: ಹೆಚ್ಡಿ ರೇವಣ್ಣ
ಹಾಸನದಲ್ಲಿನ ಇಂಜಿನಿಯರಿಂಗ್ ಕಾಲೇಜಿಗೆ ಅನುದಾನ ಬಿಡುಗಡೆ ಮಾಡಿ ಪಿಠೋಪಕರಣ ಮತ್ತು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಅನುಕೂಲತೆಗಳನ್ನು ಮಾಡಿಕೊಡುವಂತೆ ಹೆಚ್.ಡಿ. ರೇವಣ್ಣ ಮನವಿ ಮಾಡಿದ್ದಾರೆ.
ಬೆಳಗಾವಿ: ಸದನದಲ್ಲಿ ನಿನ್ನೆ (ಡಿಸೆಂಬರ್ 21) ಹೆಚ್.ಡಿ. ರೇವಣ್ಣ ಅವರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಹಾಸನದಲ್ಲಿನ ಇಂಜಿನಿಯರಿಂಗ್ ಕಾಲೇಜಿಗೆ ಅನುದಾನ ಬಿಡುಗಡೆ ಮಾಡಿ ಪಿಠೋಪಕರಣ ಮತ್ತು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಅನುಕೂಲತೆಗಳನ್ನು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಉಪನ್ಯಾಸಕರ ಹುದ್ದೆ ಕೂಡ ಇಲ್ಲಿ ಖಾಲಿ ಇದ್ದು, ಅತಿಥಿ ಉಪನ್ಯಾಸಕರು ಸಂಪೂರ್ಣವಾಗಿ ಇಲ್ಲದಂತಾಗಿದೆ. ಹೀಗಾಗಿ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ. ಸರ್ಕಾರಿ ಶಾಲಾ- ಕಾಲೇಜುಳಿಗೆ ಲಾಕ್ಡೌನ್ ನಂತರ ಮಕ್ಕಳ ಒಲವು ಹೆಚ್ಚಾಗಿದೆ ಎಂದು ಕೂಡ ಹೆಚ್.ಡಿ ರೇವಣ್ಣ ಈ ವೇಳೆ ಪ್ರಸ್ತಾಪಿಸಿದ್ದಾರೆ.
ಮತಾಂತರ ಕಾಯ್ದೆ ಮಂಡನೆ
ಬೆಳಗಾವಿ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಬಿಜೆಪಿ ಸರ್ಕಾರ ಮತಾಂತರ ಕಾಯ್ದೆ 2021 ತಿದ್ದುಪಡೆ ಮಸೂದೆಯನ್ನ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಬಗ್ಗೆ ವಿರೋಧ ಪಕ್ಷಗಳ ಪ್ರತಿರೋಧವಿದ್ದರೂ ಆಡಳಿತ ಪಕ್ಷ ಮಸೂದೆಯನ್ನ ಮಂಡಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ:
ರೇಪ್ ಆಸ್ವಾದಿಸುವ ಹೇಳಿಕೆ: ಡಬಲ್ ಫಾಲ್ಟ್ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇಂದು ಬೆಳಗಾವಿಯಲ್ಲಿ ಹೇಳಿದ್ದೇನು?
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

