ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ; 4 ಕಡೆ ವೋಟರ್ ಐಡಿ ಇರುವ ಆರೋಪ

Updated on: Jun 21, 2026 | 1:21 PM

ಬಹುಭಾಷ ನಟ ಪ್ರಕಾಶ್ ರಾಜ್ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. 4 ಬೇರೆ ಬೇರೆ ಕಡೆಗಳಲ್ಲಿ ವೋಟರ್ ಐಡಿ ಹೊಂದಿರುವ ಆರೋಪದ ಮೇಲೆ ಅವರ ವಿರುದ್ಧ ವಕೀಲ ದಿಲೀಪ್ ಕುಮಾರ್ ಎಂಬುವವರು ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 48ನೇ ಎಸಿಜಿಎಂ ಕೋರ್ಟ್​ನಿಂದ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.

ಬಹುಭಾಷ ನಟ ಪ್ರಕಾಶ್ ರಾಜ್ (Prakash Raj) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. 4 ಬೇರೆ ಬೇರೆ ಕಡೆಗಳಲ್ಲಿ ವೋಟರ್ ಐಡಿ ಹೊಂದಿರುವ ಆರೋಪದ ಮೇಲೆ ಅವರ ವಿರುದ್ಧ ವಕೀಲ ದಿಲೀಪ್ ಕುಮಾರ್ ಎಂಬುವವರು ದೂರು ನೀಡಿದ್ದರು. 2019ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ನಂತರ ಪೊಲೀಸ್ ಆಯುಕ್ತರಿಗೆ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಅಲ್ಲಿಯೂ ಕ್ರಮ ತೆಗೆದುಕೊಳ್ಳದ ಕಾರಣದಿಂದ ನ್ಯಾಯಾಲಯದಲ್ಲಿ ದಿಲೀಪ್ ಕುಮಾರ್ ಅವರು ನೇರವಾಗಿ ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 48ನೇ ಎಸಿಜಿಎಂ ಕೋರ್ಟ್​ನಿಂದ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ. ‘ಒಬ್ಬ ವ್ಯಕ್ತಿಗೆ ಒಂದೇ ವೋಟರ್ ಕಾರ್ಡ್ ಇರಬೇಕು. ಪ್ರಕಾಶ್ ರಾಜ್ ಅವರು ಏಕಕಾಲಕ್ಕೆ 4 ಕಡೆಗಳಲ್ಲಿ ವೋಟರ್ ಐಡಿ ಕಾರ್ಡ್ ಹೊಂದಿದ್ದಾರೆ. ಹಾಗಾಗಿ ದೂರು ನೀಡಿದ್ದೆ’ ಎಂದು ದಿಲೀಪ್ ಕುಮಾರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More