5 ವಿಕೆಟ್ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 271 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19.4 ಓವರ್ಗಳಲ್ಲಿ 225 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 46 ರನ್ಗಳ ಗೆಲುವು ದಾಖಲಿಸಿದೆ.
ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್ಗಳೊಂದಿಗೆ ಅವರು ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 4 ಓವರ್ಗಳನ್ನು ಎಸೆದಿದ್ದ ಅರ್ಷದೀಪ್ ಸಿಂಗ್ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು.
ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅರ್ಷದೀಪ್ ಸಿಂಗ್ ಅವರ ಚೊಚ್ಚಲ 5 ವಿಕೆಟ್. ಆದರೆ ಈ ಐದು ವಿಕೆಟ್ ಕಬಳಿಸಲು ಅವರು ನೀಡಿದ್ದು ಬರೋಬ್ಬರಿ 51 ರನ್ಗಳು. ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಬಿಟ್ಟು ಕೊಟ್ಟು ಐದು ವಿಕೆಟ್ ಪಡೆದ ಬೌಲರ್ ಎಂಬ ಹೀನಾಯ ದಾಖಲೆಯೊಂದು ಅರ್ಷದೀಪ್ ಸಿಂಗ್ ಪಾಲಾಯಿತು.
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಹೆಸರಿನಲ್ಲಿತ್ತು. 2023 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಲ್ಝಾರಿ ಜೋಸೆಫ್ 40 ರನ್ ನೀಡಿ 5 ವಿಕೆಟ್ ಕಬಳಿಸಿ ಅನಗತ್ಯ ದಾಖಲೆಗೆ ಕೊರೊಳೊಡ್ಡಿದ್ದರು. ಇದೀಗ 4 ಓವರ್ಗಳಲ್ಲಿ ಬರೋಬ್ಬರಿ 51 ರನ್ ನೀಡುವ ಮೂಲಕ ಅರ್ಷದೀಪ್ ಸಿಂಗ್ ದುಬಾರಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 271 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19.4 ಓವರ್ಗಳಲ್ಲಿ 225 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 46 ರನ್ಗಳ ಗೆಲುವು ದಾಖಲಿಸಿದೆ.
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

