5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

Updated on: Feb 01, 2026 | 10:19 AM

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19.4 ಓವರ್​ಗಳಲ್ಲಿ 225 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 46 ರನ್​ಗಳ ಗೆಲುವು ದಾಖಲಿಸಿದೆ.

ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಅವರು ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅರ್ಷದೀಪ್ ಸಿಂಗ್ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು.

ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಷದೀಪ್ ಸಿಂಗ್ ಅವರ ಚೊಚ್ಚಲ 5 ವಿಕೆಟ್. ಆದರೆ ಈ ಐದು ವಿಕೆಟ್ ಕಬಳಿಸಲು ಅವರು ನೀಡಿದ್ದು ಬರೋಬ್ಬರಿ 51 ರನ್​ಗಳು. ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಬಿಟ್ಟು ಕೊಟ್ಟು ಐದು ವಿಕೆಟ್ ಪಡೆದ ಬೌಲರ್ ಎಂಬ ಹೀನಾಯ ದಾಖಲೆಯೊಂದು ಅರ್ಷದೀಪ್ ಸಿಂಗ್ ಪಾಲಾಯಿತು.

ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಹೆಸರಿನಲ್ಲಿತ್ತು. 2023 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಲ್ಝಾರಿ ಜೋಸೆಫ್ 40 ರನ್ ನೀಡಿ 5 ವಿಕೆಟ್ ಕಬಳಿಸಿ ಅನಗತ್ಯ ದಾಖಲೆಗೆ ಕೊರೊಳೊಡ್ಡಿದ್ದರು. ಇದೀಗ 4 ಓವರ್​ಗಳಲ್ಲಿ ಬರೋಬ್ಬರಿ 51 ರನ್ ನೀಡುವ ಮೂಲಕ ಅರ್ಷದೀಪ್ ಸಿಂಗ್ ದುಬಾರಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19.4 ಓವರ್​ಗಳಲ್ಲಿ 225 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 46 ರನ್​ಗಳ ಗೆಲುವು ದಾಖಲಿಸಿದೆ.