ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ

Edited By:

Updated on: Apr 27, 2026 | 9:41 AM

ಅರಸೀಕೆರೆಯಲ್ಲಿ ನಡೆದ ಶ್ರೀ ವಾಸವಿ ಜಯಂತಿ ಮೆರವಣಿಗೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಡೋಲು ಬಾರಿಸುತ್ತಾ ಭರ್ಜರಿ ನೃತ್ಯ ಮಾಡಿದ್ದಾರೆ. ಸಾರ್ವಜನಿಕರೊಂದಿಗೆ ಬೆರೆತು ಅವರು ಹಾಕಿದ ಸ್ಟೆಪ್‌ಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅವರ ಡ್ಯಾನ್ಸ್​​ಗೆ ಜನ ಶಿಳ್ಳೆ, ಚಪ್ಪಾಳೆ ಹಾಕಿ ಸಂಭ್ರಮಿಸಿದ್ದಾರೆ.

ಹಾಸನ, ಏಪ್ರಿಲ್ 27: ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದ ಶ್ರೀ ವಾಸವಿ ಜಯಂತಿ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವದ ಮೆರವಣಿಗೆಯಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ ಸಾರ್ವಜನಿಕರೊಂದಿಗೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಿ.ಎಚ್. ರಸ್ತೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಲಾ ತಂಡಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮೆರವಣಿಗೆಯ ರಂಗನ್ನು ಇಮ್ಮಡಿಗೊಳಿಸಿದರು. ಸ್ಥಳೀಯ ಕಲಾವಿದರೊಂದಿಗೆ ತಾವೂ ಸಹ ಡೋಲು ಬಾರಿಸುತ್ತಾ, ಲಯಬದ್ಧವಾಗಿ ಕುಣಿದು ಕುಪ್ಪಳಿಸಿದರು. ಶಾಸಕರ ಈ ಉತ್ಸಾಹಭರಿತ ನೃತ್ಯವನ್ನು ಕಂಡು ನೆರೆದಿದ್ದ ನೂರಾರು ಜನರು ಶಿಳ್ಳೆ, ಚಪ್ಪಾಳೆ ತಟ್ಟುವ ಮೂಲಕ ಸಾಥ್ ನೀಡಿದರು. ಶಾಸಕರ ಜೊತೆ ಸ್ಥಳೀಯ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ಕೂಡ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us