Video: ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ; ಸಿಸಿಟಿವಿ ದೃಶ್ಯ ವೈರಲ್
ವೈರಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ವ್ಯಕ್ತಿಯೊಬ್ಬನಿಗೆ ಘೋರ ಅನುಭವವಾಗಿದೆ. ನಿಯಂತ್ರಣ ತಪ್ಪಿ ಪೆಟ್ರೋಲ್ ಆತನ ಸ್ವಂತ ಕಾರಿನ ಮೇಲೆ ಚೆಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುಷ್ಕರ್ಮಿಯ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಭಯಾನಕ ಘಟನೆ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ವ್ಯಕ್ತಿಯೊಬ್ಬ ತನ್ನ ವೈರಿಯ ಮನೆಯ ಆವರಣದ ಸುತ್ತಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾನೆ. ಆದರೆ, ಬೆಂಕಿ ಇದ್ದಕ್ಕಿದ್ದಂತೆ ಹೊತ್ತಿಕೊಂಡು ನಿಯಂತ್ರಣ ತಪ್ಪಿ ಹರಡಿದೆ. ಪರಿಣಾಮ ಈತ ಬಂದಿದ್ದ ಕಾರೇ ಬೆಂಕಿಗಾಹುತಿಯಾಗಿದೆ. ವೈರಿಯ ಮನೆಗೆ ಬೆಂಕಿ ಹಚ್ಚುವ ಗಡಿಬಿಡಿಯಲ್ಲಿ ಪೆಟ್ರೋಲ್ ಕಾರಿನ ಮೇಲೆ ಚೆಲ್ಲಿದ್ದರಿಂದ ಏಕಾಏಕಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಸಂಪೂರ್ಣ ದೃಶ್ಯಾವಳಿ ಮನೆಯ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Feb 21, 2026 02:32 PM
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

