ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳಿಂದ ಅರುಣ್ ಸಿಂಗ್ ಕಾರಿಗೆ ಮುತ್ತಿಗೆ
ಅರಣು ಸಿಂಗ್ ಹಾವೇರಿಯ ಪ್ರವಾಸಿ ಮಂದಿರ ಪ್ರವೇಶಿಸುತ್ತಿದ್ದಂತೆ, ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳು ಅರಣುಸಿಂಗ್ ಕಾರಿಗೆ ಮುತ್ತಿಗೆ ಹಾಕಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸದಲ್ಲಿದ್ದು, ಇಂದು ಹಾವೇರಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಅರಣು ಸಿಂಗ್ ಹಾವೇರಿಯ ಪ್ರವಾಸಿ ಮಂದಿರವನ್ನು ಪ್ರವೇಶಿಸುತ್ತಿದ್ದಂತೆ, ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳು ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಯೋಮಿತಿ ಹೆಚ್ಚಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದಾರೆ. ಆಗ ಅರುಣ್ ಸಿಂಗ್ ಕಾರಿನಿಂದ ಇಳಿದು ಮನವಿ ಪತ್ರ ಸ್ವೀಕರಿಸಿದರು. ಈ ವಿಚಾರ ಸಿಎಂ ಬೊಮ್ಮಾಯಿ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
Loading...
Unable to load recommendations.
Follow Us
