ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

Updated on: Jul 06, 2024 | 4:21 PM

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ನನ್ನ ಪತಿ ಅರವಿಂದ್ ಕೇಜ್ರಿವಾಲ್ "ರಾಜಕೀಯ ಪಿತೂರಿ"ಗೆ ಬಲಿಯಾಗಿದ್ದಾರೆ. 'ಸಾಕ್ಷಿಯ ಸುಳ್ಳು ಹೇಳಿಕೆ' ಆಧಾರದ ಮೇಲೆ ಇಡಿ ಅವರನ್ನು ಬಂಧಿಸಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಪ್ರಾಮಾಣಿಕ, ವಿದ್ಯಾವಂತ ಮತ್ತು ದೇಶಭಕ್ತ ವ್ಯಕ್ತಿಯಾಗಿದ್ದಾರೆ. ಸಾರ್ವಜನಿಕರು ಅವರನ್ನು ಬೆಂಬಲಿಸದಿದ್ದರೆ ಅವರಂತಹ ಬೇರೆ ಯಾವ ನಾಯಕನೂ ರಾಜಕೀಯಕ್ಕೆ ಸೇರಲು ಬಯಸುವುದಿಲ್ಲ. ಕೇಜ್ರಿವಾಲ್ ಅವರು ಆಳವಾದ ರಾಜಕೀಯ ಪಿತೂರಿಗೆ ಬಲಿಯಾಗಿದ್ದಾರೆ ಎಂದು ಸುನೀತಾ ಆರೋಪಿಸಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಜುಲೈ 12ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More