ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್ಗೆ ಸುರಿವ ಮಳೆಯಲ್ಲೂ ಹೂಮಳೆ ಸುರಿಸಿ ಭವ್ಯ ಸ್ವಾಗತ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಅವರಿಗೆ ಅಭಿಮಾನಿಗಳು, ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಾಗೂ ಅವರ ಪಕ್ಷದ ನಾಯಕರು ಅದ್ದೂರಿ ಸ್ವಾಗತ ನೀಡಿದರು.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೊನೆಗೂ ಜೈಲಿನಿಂದ ಜಾಮೀನಿನ ಮೂಲಕ ಹೊರಬಂದಿದ್ದಾರೆ. ಈ ವೇಳೆ ಅವರಿಗೆ ಸುರಿಯುವ ಮಳೆಯಲ್ಲೂ ಹೂಮಳೆ ಸುರಿಸಿ, ಪಟಾಕಿ ಸಿಡಿಸಿ ಭವ್ಯ ಸ್ವಾಗತ ನೀಡಲಾಗಿದೆ. ಸಂಜಯ್ ಸಿಂಗ್ ಅವರಂತಹ ಹಿರಿಯ ನಾಯಕರು ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಕೇಜ್ರಿವಾಲ್ ಅವರನ್ನು ಬರಮಾಡಿಕೊಂಡರು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos