ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ

Edited By:

Updated on: Jan 11, 2026 | 11:44 AM

ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಡುವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನಟಿಗೆ ಉದ್ಯಮಿ ಲಕ್ಷಾಂತರ ಮೌಲ್ಯದ ಕಾರು, ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದರು ಎಂಬ ಸಾಕ್ಷಿಗಳು ಲಭ್ಯವಾಗಿವೆ. ಇವರಿಬ್ಬರೂ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದರು ಎನ್ನುವ ವಿಷಯವೂ ಬಹಿರಂಗಗೊಂಡಿದೆ.

ಬೆಂಗಳೂರು, ಜನವರಿ 11: ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಂಟಿನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಬಹಳ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ, ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿವೆ.  ಅರವಿಂದ್​ ರೆಡ್ಡಿ ನಟಿಯೊಂದಿಗೆ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದಾಗ, ಆಕೆಗೆ 7 ಲಕ್ಷ ಮೌಲ್ಯದ ಟಿವಿ, 1 ಲಕ್ಷ ಮೌಲ್ಯದ ಹಾಸಿಗೆ, 10 ಲಕ್ಷ ಮೌಲ್ಯದ ಫರ್ನಿಚರ್, 33 ಸಾವಿರ ಮೌಲ್ಯದ ಡೈನಿಂಗ್ ಸೆಟ್, 1.30 ಲಕ್ಷ ಮೌಲ್ಯದ ಬೆಡ್, ಮತ್ತು 15 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More