ವೇದಿಕೆಯಲ್ಲೇ ಹೆಂಡತಿ ಕಾಲಿಗೆ ಬಿದ್ದ ಆರ್ಯವರ್ಧನ್ ಗುರೂಜಿ: ವಿಡಿಯೋ ನೋಡಿ

Updated on: Oct 14, 2025 | 9:24 PM

ಮಾಜಿ ಬಿಗ್ ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿ ಅವರು ಕುಟುಂಬ ಸಮೇತರಾಗಿ ‘ಜೈ’ ಸಿನಿಮಾದ ಸುದ್ದಿಗೋಷ್ಠಿಗೆ ಆಗಮಿಸಿದ್ದರು. ಈ ವೇಳೆ ಅವರು ಪತ್ನಿ ಹಾಗೂ ಮಗಳ ಜೊತೆ ವೇದಿಕೆಯಲ್ಲಿ ಮಾತನಾಡಿದರು. ‘ನನ್ನ ಪತ್ನಿಯಲ್ಲೇ ನಾನು ಲಕ್ಷ್ಮಿ, ಸರಸ್ವತಿ, ದುರ್ಗೆಯನ್ನು ಕಾಣುತ್ತೇನೆ’ ಎಂದು ಅವರು ಹೇಳಿದರು.

ಮಾಜಿ ಬಿಗ್ ಬಾಸ್ (Bigg Boss Kannada) ಸ್ಪರ್ಧಿ ಆರ್ಯವರ್ಧನ್ ಗುರೂಜಿ ಅವರು ಕುಟುಂಬ ಸಮೇತರಾಗಿ ‘ಜೈ’ ಸಿನಿಮಾ (Jai Movie) ಸುದ್ದಿಗೋಷ್ಠಿಗೆ ಆಗಮಿಸಿದ್ದರು. ಈ ವೇಳೆ ಅವರು ಪತ್ನಿ ಹಾಗೂ ಮಗಳ ಜೊತೆ ವೇದಿಕೆಯಲ್ಲಿ ಮಾತನಾಡಿದರು. ‘ನನ್ನ ಪತ್ನಿಯಲ್ಲೇ ನಾನು ಲಕ್ಷ್ಮಿ, ಸರಸ್ವತಿ, ದುರ್ಗೆಯನ್ನು ಕಾಣುತ್ತೇನೆ. ಹೆಂಡತಿಯನ್ನು ನಾನು ತುಂಬಾ ಇಷ್ಟಪಡುತ್ತೇನೆ. ಮನೆಯಲ್ಲಿ ನಾನು ಮೌನವಾಗಿ ಇರುತ್ತೇನೆ. ಈ ಪ್ರಪಂಚದಲ್ಲಿ ಯಾರೂ ಮಾಡಿರದಷ್ಟು ಲವ್ ಮಾಡುತ್ತೇನೆ. ಬೇಕಾದರೆ ನಮಸ್ಕಾರ ಮಾಡಿ ಹೇಳುತ್ತೇನೆ’ ಎಂದ ಆರ್ಯವರ್ಧನ್ ಗುರೂಜಿ (Aryavardhan Guruji) ಅವರು ಪತ್ನಿಯ ಕಾಲಿಗೆ ನಮಸ್ಕರಿಸಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More