ಬಿಎಸ್​ವೈ ಭೇಟಿಯಾಗಿ ರಾಜಿ ಸಂಧಾನದ ಬಗ್ಗೆ ಸೋಮಣ್ಣ ಹೇಳಿದ್ದಿಷ್ಟು

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 02, 2024 | 7:30 PM

ಲೋಕಸಭೆ ಚುನಾವಣೆ ಸನಿಹದಲ್ಲೇ ಯಡಿಯೂರಪ್ಪ ಮೇಲಿನ ಮುನಿಸು ಎಲ್ಲವೂ ಮುಗಿಸಿದೆ. ಮೇಲಿನವರು ಏನು ತೀರ್ಮಾನ ಮಾಡುತ್ತಾರೆ ಅದರ ಪ್ರಕಾರ ಆಗುತ್ತದೆ. ಇವೆಲ್ಲ ಮನೆ ಜಗಳ. ಈಗ ಎಲ್ಲವೂ ಸರಿಹೋಗಿದೆ. ರಾಜಕೀಯದಲ್ಲಿ ನನಗೂ ಅನುಭವ ಇದೆ. ಜೆಡಿಎಸ್​ಗೆ ತುಮಕೂರು ಬಿಟ್ಟು ಕೊಡಬೇಕು ಎಂಬ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, ಮಾ.02: ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ವಿ ಸೋಮಣ್ಣ(V Somanna), ‘ನಾವು ಟಿಕೆಟ್ ಬಗ್ಗೆ ಚರ್ಚೆ ಮಾಡಿಲ್ಲ, ಸೌಹಾರ್ದ ಯುತವಾಗಿ ಮಾತಾಡಿದ್ದೇವೆ. ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು. ಈ ಹಿನ್ನಲೆ ಕರ್ನಾಟಕದಲ್ಲಿ 28 ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಕೆಲವು ವಿಚಾರಗಳನ್ನು ನಿಮ್ಮ ಮುಂದೆಯೇ ಮಾತಾಡಿದ್ದೇನೆ. ದೇಶಕ್ಕಿಂತ ನಾವ್ಯಾರೂ ದೊಡ್ಡವರಲ್ಲ ಎಂದರು. ಇನ್ನು ಯಡಿಯೂರಪ್ಪ ಮೇಲಿನ ಮುನಿಸು ಎಲ್ಲವೂ ಮುಗಿಸಿದೆ. ಮೇಲಿನವರು ಏನು ತೀರ್ಮಾನ ಮಾಡುತ್ತಾರೆ ಅದರ ಪ್ರಕಾರ ಆಗುತ್ತದೆ. ನಾನು ಯಾವತ್ತಾದ್ರೂ ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಹೇಳಿದ್ದೀನಾ?, ನಿಮ್ಮಲ್ಲಿ ಜಗಳಗಳಿಲ್ಲವಾ, ಇವೆಲ್ಲ ಮನೆ ಜಗಳ. ಈಗ ಎಲ್ಲವೂ ಸರಿಹೋಗಿದೆ. ರಾಜಕೀಯದಲ್ಲಿ ನನಗೂ ಅನುಭವ ಇದೆ. ಜೆಡಿಎಸ್​ಗೆ ತುಮಕೂರು ಬಿಟ್ಟು ಕೊಡಬೇಕು ಎಂಬ ಚರ್ಚೆ ಇಲ್ಲ. ಅವೆಲ್ಲ ಊಹಾಪೋಹಗಳು, ದಳಕ್ಕೆ ಕೊಡಬೇಕಾ, ಬೇರೆಯವರಿಗೆ ಕೊಡಬೇಕಾ ಎಂಬುದನ್ನ ಮೇಲಿನವರು ತೀರ್ಮಾನ ಮಾಡ್ತಾರೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ