Karnataka Assembly Polls Results: ಕಾಂಗ್ರೆಸ್ ಪಕ್ಷ ಅಂದುಕೊಂಡಂತೆ 120 ಕ್ಕಿಂತ ಹೆಚ್ಚು ಸ್ಥಾನ ಪಡೆದು ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ: ಸಿದ್ದರಾಮಯ್ಯ
ರಾಜ್ಯದ ಜನತೆ ಬಿಜೆಪಿ ಸರ್ಕಾರದಿಂದ ಬೇಸತ್ತು ಹೋಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದ್ದು ನಿಜವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶಗಳ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah), ತಾವು ಎಣಿಸಿದಂತೆಯೇ ಕಾಂಗ್ರೆಸ್ 120 ಕ್ಕಿಂತ ಹೆಚ್ಚು ಸ್ಥಾನ ಪಡೆಯಲಿದೆ ಮತ್ತು ಯಾವುದೇ ಪಕ್ಷದ ನೆರವಿಲ್ಲದೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ ಎಂದು ಹೇಳಿದರು. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ (V Somanna) ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋಲಲಿದ್ದಾರೆ ಎಂದು ಅವರು ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಅಮಿತ್ ಶಾ (Amit Shah) ಅವರು ಎಷ್ಟೇ ಬಾರಿ ರಾಜ್ಯಕ್ಕೆ ಬಂದರೂ ಮತದಾರನ ಮೇಲೆ ಪ್ರಭಾವ ಬೀರಲಾರರು, ಯಾಕೆಂದರೆ, ರಾಜ್ಯದ ಜನತೆ ಬಿಜೆಪಿ ಸರ್ಕಾರದಿಂದ ಬೇಸತ್ತು ಹೋಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದ್ದು ನಿಜವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ