ಸುಳ್ಳು ಹೇಳಿ ಮುಸ್ಲಿಮರ ಬಗ್ಗೆ ದ್ವೇಷ, ಭಯ ಹುಟ್ಟಿಸಬೇಡಿ; ಬಿಜೆಪಿ ಸರ್ಕಾರದ ವಿರುದ್ಧ ಓವೈಸಿ ಆಕ್ರೋಶ

ಸುಳ್ಳು ಹೇಳಿ ಮುಸ್ಲಿಮರ ಬಗ್ಗೆ ದ್ವೇಷ, ಭಯ ಹುಟ್ಟಿಸಬೇಡಿ; ಬಿಜೆಪಿ ಸರ್ಕಾರದ ವಿರುದ್ಧ ಓವೈಸಿ ಆಕ್ರೋಶ

TV9 Web
| Updated By: ಸುಷ್ಮಾ ಚಕ್ರೆ

Updated on: Jul 13, 2022 | 9:24 AM

ಮುಸ್ಲಿಮರು ಮತ್ತು ಹಿಂದೂಗಳ ನಡುವೆ ದ್ವೇಷ ಬಿತ್ತಬೇಡಿ. ಮುಸ್ಲಿಮರ ಬಗ್ಗೆ ಭಯ ಹುಟ್ಟಿಸಬೇಡಿ ಎಂದು ಮೋದಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹಿಂದೂ ಮತ್ತು ಮುಸ್ಲಿಂ ಧರ್ಮಗಳ ನಡುವಿನ ಜನಸಂಖ್ಯೆಯ ಅಸಮತೋಲನದ ಕುರಿತು ಹೇಳಿಕೆಗಳನ್ನು ನೀಡಿದ್ದಾರೆ. ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಬಹಳ ಹೆಚ್ಚಾಗುತ್ತಿದೆ, ಹಿಂದೂಗಳೇ ಮುಂದೆ ಅಲ್ಪಸಂಖ್ಯಾತರಾಗಬಹುದು ಎಂದು ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿರುವ ಓವೈಸಿ, ಮುಸ್ಲಿಮರು ಮತ್ತು ಹಿಂದೂಗಳ ನಡುವೆ ದ್ವೇಷ ಬಿತ್ತಬೇಡಿ. ಮುಸ್ಲಿಮರ ಬಗ್ಗೆ ಭಯ ಹುಟ್ಟಿಸಬೇಡಿ ಎಂದಿದ್ದಾರೆ. ಹಾಗೇ, ಮೋದಿ ಸರ್ಕಾರದ ವಿರುದ್ಧವೂ ಕಿಡಿಕಾರಿದ್ದು, ಸಂಸತ್​ ಭವನದ ಮೇಲೆ ರಾಷ್ಟ್ರ ಲಾಂಛನವನ್ನು ಉದ್ಘಾಟನೆ ಮಾಡಲು ನರೇಂದ್ರ ಮೋದಿ ಸಂಸತ್​ನ ಬಾಸ್​ ಅಲ್ಲ. ಅವರು ಓರ್ವ ಪ್ರಧಾನಿಯಷ್ಟೇ ಎಂದು ಟೀಕಿಸಿದ್ದಾರೆ.