AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಿರಿದಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video: ಕಿರಿದಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಕ್ಷತಾ ವರ್ಕಾಡಿ
|

Updated on:Apr 29, 2026 | 3:20 PM

Share

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ಭೀಕರ ಸಂಘರ್ಷ ನಡೆದಿದೆ. ಕಿರಿದಾದ ಗಲ್ಲಿಯಲ್ಲಿ ಜನರ ಗುಂಪಿನ ಮೇಲೆ ಕಾರು ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಉಲ್ಬಣಿಸಿತು. ಕೋಪಗೊಂಡ ಸಾರ್ವಜನಿಕರು ಕಾರಿನ ಮೇಲೆ ದಾಳಿ ನಡೆಸಿ, ಗಾಜುಗಳನ್ನು ಒಡೆದು ಜಖಂಗೊಳಿಸಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ಭೀಕರ ಸಂಘರ್ಷವೊಂದು ಸಂಭವಿಸಿದ್ದು, ಕಿರಿದಾದ ಗಲ್ಲಿಯೊಂದರಲ್ಲಿ ನಡೆದ ಈ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಜನರ ಗುಂಪಿನ ಮೇಲೆ ಕಾರೊಂದು ನುಗ್ಗಲು ಪ್ರಯತ್ನಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕುಪಿತಗೊಂಡ ಸಾರ್ವಜನಿಕರು ಕಾರಿನ ಮೇಲೆ ಮನಬಂದಂತೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ. ಕಾರಿನ ಗಾಜುಗಳನ್ನು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಪುಡಿಪುಡಿ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 29, 2026 03:14 PM
Follow Us