ಲಿಖಿತ ರೂಪದಲ್ಲಿ ಭರವಸೆ ನೀಡುವಂತೆ ಸರ್ಕಾರಕ್ಕೆ ಪಟ್ಟು: 13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 13ನೇ ದಿನಕ್ಕೆ ಕಾಲಿಟ್ಟಿದೆ. ಪ್ರೋತ್ಸಾಹ ಧನ ಹೆಚ್ಚಳದ ಬಗ್ಗೆ ಸರ್ಕಾರದಿಂದ ಲಿಖಿತ ಭರವಸೆ ನೀಡುವಂತೆ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. 2025 ಜನವರಿ 10ರಂದು ಪ್ರತಿಭಟನೆ ಮಾಡಿದ್ದಾಗಲೂ ಅಂದಿನ ಸಿಎಂ ಸಿದ್ದರಾಮಯ್ಯ 2 ಸಾವಿರ ರೂಪಾಯಿ ಗೌರವ ಧನ ಹೆಚ್ಚಿಸುತ್ತೇವೆ, ಏಪ್ರಿಲ್ನಿಂದಲೇ ಇದು ಜಾರಿಯಾಗಲಿದೆ ಎಂದು ಭರವಸೆ ನೀಡಿದ್ದರು. ಆದರೆ ಆ ಹಣ ಬರಲೇ ಇಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ಬೆಂಗಳೂರು, ನವೆಂಬರ್ 29: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 13ನೇ ದಿನಕ್ಕೆ ಕಾಲಿಟ್ಟಿದೆ. ಪ್ರೋತ್ಸಾಹ ಧನವನ್ನು 2 ಸಾವಿರ ರೂ.ಹೆಚ್ಚಿಸೋದಾಗಿ ಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದರೂ, ಲಿಖಿತ ರೂಪದಲ್ಲಿ ಭರವಸೆ ನೀಡುವಂತೆ ಆಶಾ ಕಾರ್ಯಕರ್ತೆಯರ ಪಟ್ಟು ಹಿಡಿದು ಧರಣಿ ಮುಂದುವರಿಸಿದ್ದಾರೆ. 2025 ಜನವರಿ 10ರಂದು ಪ್ರತಿಭಟನೆ ಮಾಡಿದ್ದಾಗಲೂ ಅಂದಿನ ಸಿಎಂ ಸಿದ್ದರಾಮಯ್ಯ 2 ಸಾವಿರ ರೂಪಾಯಿ ಗೌರವ ಧನ ಹೆಚ್ಚಿಸುತ್ತೇವೆ, ಏಪ್ರಿಲ್ನಿಂದಲೇ ಇದು ಜಾರಿಯಾಗಲಿದೆ ಎಂದು ಭರವಸೆ ನೀಡಿದ್ದರು. ಆದರೆ ಆ ಹಣ ಬರಲೇ ಇಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 29, 2026 09:58 AM
Follow Us

