ಈ ಸರ್ಕಾರಕ್ಕೆ ಸ್ವಲ್ಪವೂ ಕರುಣೆ ಇಲ್ಲವೇ?: ಭಾರಿ ಮಳೆಯಲ್ಲೂ ಟಾರ್ಪಲ್‌ ಆಶ್ರಯದಲ್ಲಿ ಮುಂದುವರಿದ ಆಶಾ ಕಾರ್ಯಕರ್ತೆಯ ಹೋರಾಟ

Edited By:

Updated on: Nov 24, 2026 | 6:40 PM

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದೆ. ಭಾರೀ ಮಳೆಯ ನಡುವೆಯೂ ಹೋರಾಟ ಮುಂದುವರಿಸಿದ್ದು, ₹15,000 ಮಾಸಿಕ ಗೌರವಧನ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಕಾರ್ಯಕರ್ತೆಯರು ತಿಳಿಸಿದ್ದಾರೆ. ಸಿಎಂ ಜರ್ಮನ್​​​ನಿಂದ ಕಾಲ್ ಮಾಡಿ ಆಶಾ ಕಾರ್ಯಕರ್ತೆಯರ ಜತೆಗೆ ಮಾತನಾಡಿದ್ದಾರೆ. ಅದರೂ ಜಗ್ಗದೇ ಪ್ರತಿಭಟನೆ ಮುಂದುವರಿಸಿದ್ದಾರೆ.

ಬೆಂಗಳೂರು, ನ.24: ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಏಳು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು, ಭಾರೀ ಮಳೆಯ ನಡುವೆಯೂ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಟಾರ್ಪಲ್‌ನ ಆಶ್ರಯ ಪಡೆದಿರುವ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಮಳೆಯ ಮಧ್ಯೆಯೂ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಆಶಾ ಕಾರ್ಯಕರ್ತೆಯರು ಪ್ರತಿಕ್ರಿಯಿಸಿದ್ದು, “ಮಳೆಯು ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತಿದೆ” ಎಂದು ನಂಬಿದ್ದಾರೆ. ಈ ಹಿಂದೆ ಇದೇ ರೀತಿ ಮಳೆ ಬಂದಾಗ ಕಾಂಗ್ರೆಸ್ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಘೋಷಿಸಿತ್ತು ಎಂಬುದನ್ನು ಸ್ಮರಿಸಿದರು. ಸದ್ಯಕ್ಕೆ, ತಿಂಗಳಿಗೆ ₹15,000 ಗೌರವಧನವನ್ನು ವೇತನವನ್ನಾಗಿ ನೀಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಸರ್ಕಾರಕ್ಕೆ ತಾಯಿ ಕರುಳು ಇಲ್ಲವೇ ಎಂದು ಪ್ರಶ್ನಿಸಿರುವ ಪ್ರತಿಭಟನಾಕಾರರು, ಮುಖ್ಯಮಂತ್ರಿಗಳು ಅಥವಾ ಅಧಿಕಾರಿಗಳು ತಮ್ಮಂತಹ ಪರಿಸ್ಥಿತಿಯಲ್ಲಿ ಒಂದು ಗಂಟೆ ನಿಂತುಕೊಂಡರೆ ನೋವು ಅರ್ಥವಾಗುತ್ತದೆ ಎಂದರು. ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ದೃಢಸಂಕಲ್ಪ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 24, 2026 06:36 PM
Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More