AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಮಾತಿನ ಭರವಸೆ ಬೇಡ, ಲಿಖಿತ ಆದೇಶ ಬೇಕು ಎಂದು ಪಟ್ಟು!

9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಮಾತಿನ ಭರವಸೆ ಬೇಡ, ಲಿಖಿತ ಆದೇಶ ಬೇಕು ಎಂದು ಪಟ್ಟು!

ಕಿರಣ್​ ಸೂರ್ಯ
| Edited By: |

Updated on: Nov 25, 2026 | 10:13 AM

Share

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ₹15,000 ಗೌರವಧನದ ಲಿಖಿತ ಭರವಸೆಗಾಗಿ ಆಗ್ರಹಿಸಿ, ಮಳೆ-ಚಳಿ ಲೆಕ್ಕಿಸದೆ ಹೋರಾಟ ಮುಂದುವರಿಸಿದ್ದಾರೆ. ಅನಾರೋಗ್ಯ, ಸಂಧಾನ ಸಭೆಗಳ ವಿಫಲತೆಗಳ ನಡುವೆಯೂ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ಬೆಂಗಳೂರು, ನವೆಂಬರ್ 25: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಗೌರವಧನವನ್ನು ₹15,000ಕ್ಕೆ ಹೆಚ್ಚಿಸಬೇಕು ಹಾಗೂ ಈ ಕುರಿತು ಸರ್ಕಾರದಿಂದ ಲಿಖಿತ ಭರವಸೆ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು, ಪುಟ್ಟ ಮಕ್ಕಳೊಂದಿಗೆ ಮಳೆ, ಚಳಿ, ಬಿಸಿಲನ್ನೂ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಇದುವರೆಗೂ 15-20ಕ್ಕೂ ಹೆಚ್ಚು ಕಾರ್ಯಕರ್ತೆಯರು ಅನಾರೋಗ್ಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಳೆ ಸುರಿದ ಕಾರಣ ಫ್ರೀಡಂ ಪಾರ್ಕ್‌ನಲ್ಲಿ ಕೊಚ್ಚೆ, ಗಲೀಜು ತುಂಬಿದ್ದು, ಹಲವರು ರಸ್ತೆ ಬದಿಯಲ್ಲೇ ಟಾರ್ಪಾಲ್ ಹಾಕಿಕೊಂಡು ಮಲಗುವ ಸ್ಥಿತಿ ನಿರ್ಮಾಣವಾಗಿದೆ.

ಈ ಹಿಂದೆ ನಡೆದ ಯು.ಟಿ. ಖಾದರ್ ಮತ್ತು ಮುಖ್ಯಮಂತ್ರಿ ಅವರೊಂದಿಗಿನ ಎರಡು ಸಂಧಾನ ಸಭೆಗಳು ವಿಫಲವಾಗಿವೆ. ಮುಖ್ಯಮಂತ್ರಿ ಅವರು ಜಪಾನ್‌ನಿಂದಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದರು. ಆದರೆ, ಮಾತಿನ ಭರವಸೆಗಳು ಬೇಡ, ಲಿಖಿತ ಭರವಸೆ ಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More