ಸಿಎಂ ಸಂಧಾನದ ನಂತರವೂ 4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ!

Updated on: Nov 20, 2026 | 8:48 AM

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. 15,000 ರೂ. ಗೌರವಧನ ಹೆಚ್ಚಳ ಹಾಗೂ ಲಿಖಿತ ಭರವಸೆಗೆ ಆಗ್ರಹಿಸಿ, ಕೊರೆಯುವ ಚಳಿಯಲ್ಲೂ ಮಕ್ಕಳೊಂದಿಗೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ಮನವಿಯ ಹೊರತಾಗಿಯೂ, ಆಶಾ ಕಾರ್ಯಕರ್ತೆಯರು ತಮ್ಮ ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.

ಬೆಂಗಳೂರು, ನವೆಂಬರ್ 20: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ತಲುಪಿದೆ. 15,000 ರೂಪಾಯಿ ಗೌರವಧನ ಹೆಚ್ಚಳವೇ ಅವರ ಪ್ರಮುಖ ಬೇಡಿಕೆಯಾಗಿದೆ. ಕೊರೆಯುವ ಚಳಿಯಲ್ಲಿ, ಪುಟ್ಟ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಲಿಖಿತ ಭರವಸೆ ನೀಡುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರು ರಸ್ತೆಯನ್ನೇ ಹಾಸಿಗೆ ಮಾಡಿಕೊಂಡು, ಚಳಿಯಲ್ಲಿ ಮಕ್ಕಳನ್ನು ಎದೆಗಪ್ಪಿಕೊಂಡು ಮಲಗುವ ಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರಿಗೆ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದು, ಆರ್ಥಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೋರಿದ್ದಾರೆ. ಪ್ರೋತ್ಸಾಹ ಧನ ಸೇರಿದಂತೆ 8 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದಿರುವ ಸಿಎಂ, ಬೇಡಿಕೆಗಳ ಬಗ್ಗೆ ಒಂದೇ ದಿನದಲ್ಲಿ ತೀರ್ಮಾನಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಸಿಎಂ ಮನವಿಗೆ ಜಗ್ಗದ ಆಶಾ ಕಾರ್ಯಕರ್ತೆಯರು, ಲಿಖಿತ ಭರವಸೆ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More