ಆಶಾ ಕಾರ್ಯಕರ್ತೆಯರ 2ನೇ ಸುತ್ತಿನ ಸಭೆಯೂ ವಿಫಲ: ಶುಕ್ರವಾರದ ಸಭೆಯತ್ತ ಚಿತ್ತ

Edited By:

Updated on: Nov 26, 2026 | 7:49 PM

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಅವರೊಂದಿಗೆ ನಡೆದ ಎರಡನೇ ಸುತ್ತಿನ ಸಭೆಯೂ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ಮಾಸಿಕ 15 ಸಾವಿರ ರೂಪಾಯಿ ಗೌರವಧನ ಸೇರಿದಂತೆ ಎಂಟು ಬೇಡಿಕೆಗಳಿಗೆ ಲಿಖಿತ ಆದೇಶ ನೀಡುವಂತೆ ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದು, ಶುಕ್ರವಾರದ ಸಭೆಯತ್ತ ಗಮನ ಹರಿಸಿದ್ದಾರೆ.

ಬೆಂಗಳೂರು, ನವೆಂಬರ್ 26: ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಅವರೊಂದಿಗೆ ನಡೆದ ಎರಡನೇ ಸುತ್ತಿನ ಸಭೆಯೂ ಯಾವುದೇ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಬೇಡಿಕೆಗಳ ಕುರಿತು ಮಾಹಿತಿ ನೀಡುವುದಾಗಿ ಕಾರ್ಯದರ್ಶಿ ತಿಳಿಸಿದ್ದಾರೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ಹೇಳಿದ್ದಾರೆ.

ಬುಧವಾರ ಹಾಗೂ ಗುರುವಾರ ಬೆಳಗ್ಗೆ ನಡೆದ ಸಭೆಗಳಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಮಂಡಿಸಿದ್ದಾರೆ. ಮಾಸಿಕ 15 ಸಾವಿರ ರೂಪಾಯಿ ಗೌರವಧನ ಸೇರಿದಂತೆ ಒಟ್ಟು ಎಂಟು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಆದರೆ, ಬೇಡಿಕೆಗಳ ಕುರಿತು ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಸಭೆಯ ಬಳಿಕ ಮಾತನಾಡಿದ ನಾಗಲಕ್ಷ್ಮೀ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಅವರು ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ತಿಳಿಸುವುದಾಗಿ ಹೇಳಿದ್ದಾರೆ. ಬೇಡಿಕೆಗಳಿಗೆ ಸಂಬಂಧಿಸಿದ ಅಂಕಿ-ಅಂಶಗಳ ಕುರಿತು ಸಭೆಯಲ್ಲಿ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಲಿಖಿತ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕೇವಲ ಮೌಖಿಕ ಭರವಸೆಗಳಿಗೆ ಹೋರಾಟವನ್ನು ಕೈಬಿಡುವುದಿಲ್ಲ ಎಂದು ನಾಗಲಕ್ಷ್ಮೀ ಸ್ಪಷ್ಟಪಡಿಸಿದ್ದಾರೆ. ಇದು ಯಾರನ್ನೂ ಬೆದರಿಸುವ ಹೋರಾಟವಲ್ಲ, ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆ ಎಂದು ಅವರು ಹೇಳಿದ್ದಾರೆ. ನಾಳೆ ನಡೆಯಲಿರುವ ಸಭೆಯಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಲಿಖಿತ ಭರವಸೆ ಸಿಗುವವರೆಗೂ ಆಶಾ ಕಾರ್ಯಕರ್ತೆಯರ ಹೋರಾಟ ಮುಂದುವರಿಯಲಿದೆ ಎಂದು ನಾಗಲಕ್ಷ್ಮೀ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More