ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ

Updated By: Ganapathi Sharma

Updated on: Jun 27, 2025 | 8:54 AM

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಮನೆ ಮಾಡಿದ್ದು, ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಈ ಸಂದರ್ಭದಲ್ಲಿ, ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ಆರಾಧನೆಯ ಪ್ರಯೋಜನಗಳ ಬಗ್ಗೆ ದೇಗುಲದ ಪ್ರಧಾನ ಅರ್ಚಕ ಡಾ. ಎನ್ ಶಶಿಶೇಖರ ದೀಕ್ಷಿತ್ ವಿವರಣೆ ನೀಡಿದ್ದಾರೆ.

ಮೈಸೂರು, ಜೂನ್ 27: ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಚಾಮುಂಡೇಶ್ವರಿ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಎನ್ ಶಶಿಶೇಖರ ದೀಕ್ಷಿತ್ ‘ಟಿವಿ9’ ಜತೆ ಮಾತನಾಡಿದ್ದು, ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ಆರಾಧನೆಯಿಂದ ಏನೆಲ್ಲಾ ಒಳಿತು ಆಗುತ್ತದೆ? ಪ್ರಯೋಜನಗಳೇನು? ನಂಬಿಕೆಗಳೇನು ಎಂಬ ಬಗ್ಗೆ ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.

ಇದನ್ನೂ ಓದಿ: ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮ, ಭಕ್ತರಿಗೆ ಸೂಚನೆಗಳೇನು? ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ