Chamundi Hill: ಆಷಾಢ ಮೊದಲ ಶುಕ್ರವಾರ, ಚಾಮುಂಡೇಶ್ವರಿ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ
ಇಂದು ಆಷಾಢ ಮಾಸದ ಮೊದಲ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಹರಿದು ಬರ್ತಿದ್ದಾರೆ.
ಮೈಸೂರು: ಇಂದು(ಜೂನ್ 23) ಆಷಾಢ ಮಾಸದ ಮೊದಲ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಹರಿದು ಬರ್ತಿದ್ದಾರೆ. ಈಗಾಗಲೇ ದೇವಿಗೆ ಅಲಂಕಾರ ಮಾಡಲಾಗಿದ್ದು, ಪೂಜೆ ಪುನಸ್ಕಾರಗಳು ನಡೆಯುತ್ತಿವೆ. ಇನ್ನು ಬೆಳಗ್ಗೆ 5.30ರಿಂದಲೇ ಅಮ್ಮನವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಭಕ್ತರ ದಟ್ಟಣೆಯಿಂದಾಗಿ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಇತ್ತ ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ಮೈಸೂರಿನ ಲಲಿತ್ ಮಹಲ್ ಮೈದಾನದಿಂದ ಬಸ್ ಸಿಗಲಿದೆ. ಸಾಮಾನ್ಯ ದರ್ಶನ ರೂ 300 ಹಾಗೂ ರೂ 50ರ ದರ್ಶನ ಟಿಕೆಟ್ ದೊರೆಯಲಿದ್ದು, ಚಾಮುಂಡಿಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
Published on: Jun 23, 2023 08:12 AM
Latest Videos