ಆಷಾಢ ಶುಕ್ರವಾರ ದಿನವೇ ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ ಸ್ಕಂದ ಪ್ರಸಾದ್

Updated on: Jul 05, 2025 | 11:58 AM

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮನೆಯ ದನ ಹೆಣ್ಣು ಕರುವಿಗೆ ಜನ್ಮ ನೀಡಿದ್ದು, ಆಷಾಢ ಶುಕ್ರವಾರದಂದೇ ಹೊಸ ಸದಸ್ಯಳ ಆಗಮನವಾಗಿದ್ದಕ್ಕೆ ಸಂಸದರು ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪತ್ನಿ ಶಿವಶ್ರೀ ಸ್ಕಂದ ಪ್ರಸಾದ್ ಹಾಡಿನ ಮೂಲಕ ಕರುವನ್ನು ಮುದ್ದಿಸುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಜುಲೈ: ಶುಭ ಆಷಾಢ ಶುಕ್ರವಾರದಂದೇ ನಮ್ಮ ಮನೆಗೆ ಹೊಸ ಸದಸ್ಯಳ ಆಗಮನವಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ. ‘‘ಇಂದು, ಶುಭ ಆಷಾಢ ಶುಕ್ರವಾರದಂದು, ನಮ್ಮ ಕುಟುಂಬಕ್ಕೆ ಹೊಸ ಸದಸ್ಯಳನ್ನು ಸ್ವಾಗತಿಸಿದೆವು. ನಾವು ಅವಳನ್ನು ಗೌರಿ, ಲಕ್ಷ್ಮಿ, ರಾಧೆ ಹೀಗೆಲ್ಲ ಹೆಸರುಗಳಿಂದ ಕರೆಯುತ್ತಿದ್ದೇವೆ. ಅವಳು ತುಂಬಾ ದೈವಿಕಳಾಗಿದ್ದು, ಹಾಡನ್ನು ಇಷ್ಟಪಡುತ್ತಾಳೆ’’ ಎಂದು ಸೂರ್ಯ ಉಲ್ಲೇಖಿಸಿದ್ದಾರೆ.

ಅಂದಹಾಗೆ, ತೇಜಸ್ವಿ ಸೂರ್ಯ ಮನೆಗೆ ಹೆಣ್ಣು ಕರುವೊಂದರ ಆಗಮನವಾಗಿದ್ದು, ಅದನ್ನು ತೇಜಸ್ವಿ ಅವರ ಪತ್ನಿ ಶಿವಶ್ರೀ ಸ್ಕಂದ ಪ್ರಸಾದ್ ಹಾಡು ಹಾಡಿ ಸ್ವಾಗತಿಸಿದ್ದಾರೆ. ಈ ವಿಡಿಯೋವನ್ನು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More