ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದ ಸಂಭ್ರಮ ಮುಗಿಲುಮುಟ್ಟಿದ್ದು, ಭಕ್ತಸಾಗರವೇ ನಾಡ ಅಧಿದೇವತೆಯ ದರ್ಶನಕ್ಕೆ ಹರಿದುಬಂದಿದೆ. ಭಕ್ತರಿಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ದರ್ಶನ ಸಂಬಂಧಿತ ವಿವರಗಳು ಹಾಗೂ ಆಷಾಢ ಶುಕ್ರವಾರ ಶಕ್ತಿದೇವತೆಯ ಪೂಜೆಯ ಮಹತ್ವವೇನು ಎಂಬುದರ ವಿವರ ಇಲ್ಲಿದೆ.
ಮೈಸೂರು, ಜುಲೈ 4: ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ ಭಕ್ತರು ಬಂದ ಕಾರಣ ಸಾಕಷ್ಟು ಗೊಂದಲಗಳಾಗಿದ್ದವು. ಹೀಗಾಗಿ ಈ ಬಾರಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಮೆಟ್ಟಿಲುಗಳನ್ನೇರಿ ಬಂದವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ದರ್ಶನ ಸಂಬಂಧಿತ ಇತರ ಮಾಹಿತಿ ವಿಡಿಯೋದಲ್ಲಿದೆ ನೋಡಿ.
ಇದನ್ನೂ ಓದಿ: ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮ, ಭಕ್ತರಿಗೆ ಸೂಚನೆಗಳೇನು? ಇಲ್ಲಿದೆ ಸಂಪೂರ್ಣ ವಿವರ