ಆಷಾಢಮಾಸದ ಕೊನೆ ಶುಕ್ರವಾರ, ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಜನಸಾಗರ, ವಿಡಿಯೋ ನೋಡಿ

|

Updated on: Aug 02, 2024 | 3:09 PM

ಇಂದು (ಆಗಸ್ಟ್​ 02) ಆಷಾಢಮಾಸದ ನಾಲ್ಕನೇ ಹಾಗೂ ಕೊನೆ ಶುಕ್ರವಾರ. ಈ ಹಿನ್ನೆಲೆಯಲ್ಲಿ ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು ಅಲಂಕಾರ ಮಾಡಲಾಗಿದೆ. ವಿಡಿಯೋ ನೋಡಿ

ಇಂದು (ಆಗಸ್ಟ್​ 02) ಆಷಾಢಮಾಸದ (Ashad Masa) ನಾಲ್ಕನೇ ಹಾಗೂ ಕೊನೆ ಶುಕ್ರವಾರ. ಈ ಹಿನ್ನೆಲೆಯಲ್ಲಿ ನಾಡದೇವತೆ ಮೈಸೂರಿನ (Mysore) ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು ಅಲಂಕಾರ ಮಾಡಲಾಗಿದೆ. ತಾಯಿ ಚಾಮುಂಡೇಶ್ವರಿ ಆಷಾಢ ಮಾಸದ ಕೊನೆ ಶುಕ್ರವಾರ ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ಬೆಳಿಗ್ಗೆಯಿಂದ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿವೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಕೊನೆ ಶುಕ್ರವಾರ ಪ್ರಯುಕ್ತ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾಡಳಿತದ ವತಿಯಿಂದ ಎಲ್ಲ ವ್ಯವಸ್ಥೆ ಮಾಡಲಾಗಿದ್ದು, ಯಾವುದೆ ತೊಂದರೆಯಾಗದಂತೆ ಕ್ರಮ ವಹಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ