AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಆಷಾಢ ಬುಧವಾರದ ರಾಶಿ ಭವಿಷ್ಯ ತಿಳಿಯಲು ಈ ವಿಡಿಯೋ ನೋಡಿ

Nithya Bhavishya: ಆಷಾಢ ಬುಧವಾರದ ರಾಶಿ ಭವಿಷ್ಯ ತಿಳಿಯಲು ಈ ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Jul 17, 2024 | 6:45 AM

ಬುಧವಾರ ಶಿವನ ಪುತ್ರನಾದ ಗಣೇಶನ ಅಥವಾ ಗಣಪತಿಯ ದಿನ. ಈ ದಿನ ಗಣಪತಿ ಆರಾಧನೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಲಾಗುತ್ತದೆ. ಆಷಾಢ ಬುಧವಾರದ ರಾಶಿ ಭವಿಷ್ಯ ಹೇಗಿದೆ? ಗ್ರಹಗಳ ಸಂಚಾರ ಹೇಗಿದೆ? ನಿಮ್ಮ ಕಾರ್ಯಗಳು ನಿರ್ವಿಘ್ನದಿಂದ ಸಾಗುತ್ತವೆ? ಎಂಬ ಪ್ರಶ್ನೆಗಳಿಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.17) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಸಾಧ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 12:39 ರಿಂದ 14:15ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:50 ರಿಂದ 09:26ರ ವರೆಗೆ, ಗುಳಿಕ ಕಾಲ 11:02ರಿಂದ 12:39ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ