ಆಂಗ್ಲರ ಮುಂದೆ ಸೆಟೆದು ನಿಂತ ಆಸ್ಟ್ರೇಲಿಯನ್ನರು

Updated on: Dec 06, 2025 | 7:32 AM

ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಪರ ಜಾಕ್ ವೆದರಾಲ್ಡ್ 72 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾರ್ನಸ್ ಲಾಬುಶೇನ್ 65 ರನ್ ಬಾರಿಸಿದರೆ, ಆ ಬಳಿಕ ಬಂದ ಸ್ಟೀವ್ ಸ್ಮಿತ್ 61 ರನ್ ಗಳಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 378 ರನ್ ಕಲೆಹಾಕಿ ಮೊದಲ ಇನಿಂಗ್ಸ್ ನಲ್ಲಿ 44 ರನ್ ಗಳ ಮುನ್ನಡೆಯೊಂದಿಗೆ ಮೂರನೇ ದಿನದಾಟಕ್ಕೆ ಕಾಲಿಟ್ಟಿದೆ.

ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 334 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಪರ ಜಾಕ್ ವೆದರಾಲ್ಡ್ 72 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾರ್ನಸ್ ಲಾಬುಶೇನ್ 65 ರನ್ ಬಾರಿಸಿದರೆ, ಆ ಬಳಿಕ ಬಂದ ಸ್ಟೀವ್ ಸ್ಮಿತ್ 61 ರನ್ ಗಳಿಸಿದರು.

ಈ ಮೂಲಕ ಆಸ್ಟ್ರೇಲಿಯಾ ತಂಡವು 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 378 ರನ್ ಕಲೆಹಾಕಿ ಮೊದಲ ಇನಿಂಗ್ಸ್ ನಲ್ಲಿ 44 ರನ್ ಗಳ ಮುನ್ನಡೆಯೊಂದಿಗೆ ಮೂರನೇ ದಿನದಾಟಕ್ಕೆ ಕಾಲಿಟ್ಟಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಜೇಕ್ ವೆದರಾಲ್ಡ್ , ಟ್ರಾವಿಸ್ ಹೆಡ್ , ಮಾರ್ನಸ್ ಲ್ಯಾಬುಶೇನ್ , ಸ್ಟೀವ್ ಸ್ಮಿತ್ (ನಾಯಕ) , ಕ್ಯಾಮರೋನ್ ಗ್ರೀನ್ , ಜೋಶ್ ಇಂಗ್ಲಿಸ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮೈಕೆಲ್ ನೇಸರ್ , ಮಿಚೆಲ್ ಸ್ಟಾರ್ಕ್ , ಸ್ಕಾಟ್ ಬೋಲ್ಯಾಂಡ್ , ಬ್ರೆಂಡನ್ ಡಾಗೆಟ್.

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ , ಬೆನ್ ಡಕೆಟ್ , ಒಲೀ ಪೋಪ್ , ಜೋ ರೂಟ್ , ಹ್ಯಾರಿ ಬ್ರೂಕ್ , ಬೆನ್ ಸ್ಟೋಕ್ಸ್ (ನಾಯಕ) , ಜೇಮಿ ಸ್ಮಿತ್ (ವಿಕೆಟ್ ಕೀಪರ್) ವಿಲ್ ಜ್ಯಾಕ್ಸ್ , ಗಸ್ ಅಟ್ಕಿನ್ಸನ್ , ಬ್ರೈಡನ್ ಕಾರ್ಸ್ , ಜೋಫ್ರಾ ಆರ್ಚರ್.