VIDEO: ಸ್ಟಾರ್ಕ್ ಸ್ಪಾರ್ಕ್… ವಾಟ್ ಎ ಕ್ಯಾಚ್..!
Australia vs England, 1st Test: ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದರು. 2ನೇ ಇನಿಂಗ್ಸ್ನ ಮೊದಲ ಓವರ್ನ 5ನೇ ಎಸೆತದಲ್ಲಿ ಝಾಕ್ ಕ್ರಾಲಿ (0) ಅವರ ವಿಕೆಟ್ ಪಡೆದರು. ಅದು ಕೂಡ ಸ್ಟ್ರೈಟ್ ಹಿಟ್ ಹೊಡೆತವನ್ನು ಅದ್ಭುತ ಡೈವಿಂಗ್ ಹೊಡೆದು ಹಿಡಿಯುವ ಮೂಲಕ ಎಂಬುದು ವಿಶೇಷ. ಇದೀಗ ಸ್ಟಾರ್ಕ್ ಅವರ ಈ ಅದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಪರ್ತ್ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 172 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡ 132 ರನ್ಗಳಿಗೆ ಸರ್ವಪತನ ಕಂಡಿದೆ.
ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದರು. 2ನೇ ಇನಿಂಗ್ಸ್ನ ಮೊದಲ ಓವರ್ನ 5ನೇ ಎಸೆತದಲ್ಲಿ ಝಾಕ್ ಕ್ರಾಲಿ (0) ಅವರ ವಿಕೆಟ್ ಪಡೆದರು. ಅದು ಕೂಡ ಸ್ಟ್ರೈಟ್ ಹಿಟ್ ಹೊಡೆತವನ್ನು ಅದ್ಭುತ ಡೈವಿಂಗ್ ಹೊಡೆದು ಹಿಡಿಯುವ ಮೂಲಕ ಎಂಬುದು ವಿಶೇಷ. ಇದೀಗ ಸ್ಟಾರ್ಕ್ ಅವರ ಈ ಅದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವು ಕೇವಲ 164 ರನ್ಗಳಿಸಿ ಆಲೌಟ್ ಆಗಿದೆ. ಅದರಂತೆ ಕೊನೆಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡ 205 ರನ್ಗಳ ಗುರಿ ಪಡೆದುಕೊಂಡಿದೆ.

