VIDEO: ಸ್ಟಾರ್ಕ್​ ಸ್ಪಾರ್ಕ್​… ವಾಟ್ ಎ ಕ್ಯಾಚ್..!

Updated on: Nov 22, 2025 | 12:57 PM

Australia vs England, 1st Test: ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದರು. 2ನೇ ಇನಿಂಗ್ಸ್​ನ ಮೊದಲ ಓವರ್​ನ 5ನೇ ಎಸೆತದಲ್ಲಿ ಝಾಕ್ ಕ್ರಾಲಿ (0) ಅವರ ವಿಕೆಟ್ ಪಡೆದರು. ಅದು ಕೂಡ ಸ್ಟ್ರೈಟ್ ಹಿಟ್​ ಹೊಡೆತವನ್ನು ಅದ್ಭುತ ಡೈವಿಂಗ್ ಹೊಡೆದು ಹಿಡಿಯುವ ಮೂಲಕ ಎಂಬುದು ವಿಶೇಷ. ಇದೀಗ  ಸ್ಟಾರ್ಕ್ ಅವರ ಈ ಅದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಪರ್ತ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 172 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡ 132 ರನ್​ಗಳಿಗೆ ಸರ್ವಪತನ ಕಂಡಿದೆ.

ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದರು. 2ನೇ ಇನಿಂಗ್ಸ್​ನ ಮೊದಲ ಓವರ್​ನ 5ನೇ ಎಸೆತದಲ್ಲಿ ಝಾಕ್ ಕ್ರಾಲಿ (0) ಅವರ ವಿಕೆಟ್ ಪಡೆದರು. ಅದು ಕೂಡ ಸ್ಟ್ರೈಟ್ ಹಿಟ್​ ಹೊಡೆತವನ್ನು ಅದ್ಭುತ ಡೈವಿಂಗ್ ಹೊಡೆದು ಹಿಡಿಯುವ ಮೂಲಕ ಎಂಬುದು ವಿಶೇಷ. ಇದೀಗ  ಸ್ಟಾರ್ಕ್ ಅವರ ಈ ಅದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವು ಕೇವಲ 164 ರನ್​ಗಳಿಸಿ ಆಲೌಟ್ ಆಗಿದೆ. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ 205 ರನ್​ಗಳ ಗುರಿ ಪಡೆದುಕೊಂಡಿದೆ.