ಗೆಳತಿಯ ಆರತಕ್ಷತೆಗೆ ತಪ್ಪದೆ ಹಾಜರಿ ಹಾಕಿದ ಆಶಿಕಾ ರಂಗನಾಥ್

Updated on: Mar 05, 2026 | 10:55 AM

ಆಶಿಕಾ ರಂಗನಾಥ್ ಅವರು ರಶ್ಮಿಕಾ ಮಂದಣ್ಣ ಅವರ ಆರತಕ್ಷತೆಗೆ ಹಾಜರಿ ಹಾಕಿದ್ದಾರೆ. ಗೆಳೆಯನ ವಿವಾಹ ಇದ್ದ ಕಾರಣ ರಶ್ಮಿಕಾರ ಹಳದಿ ಶಾಸ್ತ್ರದಲ್ಲಿ ಮಾತ್ರ ಅವರು ಭಾಗಿ ಆಗಿದ್ದರು. ಈಗ ವಿವಾಹ ಸಂಭ್ರಮದಲ್ಲಿ ಅವರು ಕೂಡ ಹಾಜರಿ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಆಶಿಕಾ ರಂಗನಾಥ್ ಹಾಗೂ ರಶ್ಮಿಕಾ ಮಂದಣ್ಣ ಮಧ್ಯೆ ಒಳ್ಳೆಯ ಗೆಳೆತನ ಇದೆ. ರಶ್ಮಿಕಾ ಅವರ ಹಳದಿ ಶಾಸ್ತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ಭಾಗಿ ಆಗಿದ್ದರು. ಆದರೆ, ಮದುವೆಯಲ್ಲಿ ಭಾಗಿ ಆಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಆಶಿಕಾ ರಶ್ಮಿಕಾ ಹಾಗೂ ವಿಜಯ್ ಅವರ ವಿವಾಹ ಆರತಕ್ಷತೆಯಲ್ಲಿ ಭಾಗಿ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More