ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ

Updated on: May 25, 2026 | 12:21 PM

‘ಬಿಗ್ ಬಾಸ್’ ಖ್ಯಾತಿಯ ಅಶ್ವಿನಿ ಗೌಡ ಅವರು ಈಗ ಅಭಿಮಾನಿಗಳ ಬಳಿ ಒಂದು ವಿಶೇಷ ಮನವಿ ಇಟ್ಟಿದ್ದಾರೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ನಾವು ಉತ್ತರ ಹೇಳುತ್ತೇವೆ. ಅಶ್ವಿನಿ ಗೌಡ ಅವರು ‘ಹಗ್ರೀವ’ ಹೆಸರಿನ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಈ ಚಿತ್ರವನ್ನು ನೋಡುವಂತೆ ಅವರು ಕೋರಿಕೊಂಡಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ ಅವರು ಈಗ ಅಭಿಮಾನಿಗಳ ಬಳಿ ಒಂದು ವಿಶೇಷ ಮನವಿ ಇಟ್ಟಿದ್ದಾರೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಅಶ್ವಿನಿ ಗೌಡ, ಧನ್ವೀರ್, ಸುನೀಲ್ ಮೊದಲಾದವರು ನಟಿಸಿರುವ ‘ಹಯಗ್ರೀವ’ ಹೆಸರಿನ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಆರಂಭಿಸಿದೆ. ಈ ಚಿತ್ರವನ್ನು ನೋಡುವಂತೆ ಅವರು ಅಭಿಮಾನಿಗಳಲ್ಲಿ ಕೋರಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅಶ್ವಿನಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More