ಅಶ್ವಿನಿ ಗೌಡಗೆ ಶಿಕ್ಷೆ ಕೊಡಿಸಿದ ಗಿಲ್ಲಿ; ಉರಿಯೋ ಬೆಂಕಿಗೆ ತುಪ್ಪ

Updated on: Nov 17, 2025 | 8:26 AM

‘ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ಮಧ್ಯೆ ಕಿರಿಕ್ ಆಗುತ್ತಲೇ ಇರುತ್ತದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಈಗ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ನಟ ಶಿಕ್ಷೆ ಕೊಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಅವರ ಬಗ್ಗೆ ದೂರುಗಳ ಸರಮಾಲೆ ಬಂದಿದೆ. ಅವರು ಮನೆಯ ನಿಯಮವನ್ನು ಹೆಚ್ಚು ಮುರಿಯುತ್ತಾರೆ ಎಂಬ ಆರೋಪ ಕೇಳಿ ಬಂದವು. ಗಿಲ್ಲಿ ನಟ ಅವರು, ‘ಅಶ್ವಿನಿಗೆ ದೊಡ್ಡ ಶಿಕ್ಷೆ ಕೊಡಿಸಿ’ ಎಂದು ಆಗ್ರಹಿಸಿದರು. ಅವರು ಎಲ್ಲರ ಬಳಿ ಹೋಗಿ ಬಸ್ಕಿ ಹೊಡೆದು ಕ್ಷಮೆ ಕೇಳಬೇಕಿತ್ತು. ಗಿಲ್ಲಿ ಬಳಿ ಬಂದಾಗ ಅವರು ಕಾಲ ಮೇಲೆ ಕಾಲು ಹಾಕಿ ಕೂತಿದ್ದರು. ಇದು ಅಶ್ವಿನಿ ಗೌಡ ಕೋಪಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More