ಅಶ್ವಿನಿ ಪುನೀತ್ ತಂದೆ ನಿಧನ ಹಿನ್ನೆಲೆ; ಆಸ್ಪತ್ರೆಗೆ ಧಾವಿಸಿದ ರಾಜ್ ಕುಟುಂಬ
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಸ್ಥಿತಿ ಕಂಡು ಅಭಿಮಾನಿಗಳು ಮರುಗುತ್ತಿದ್ದಾರೆ. ಕೆಲವೇ ತಿಂಗಳ ಅಂತರದಲ್ಲಿ ಪತಿ ಮತ್ತು ತಂದೆಯನ್ನು ಅವರು ಕಳೆದುಕೊಳ್ಳುವಂತಾಗಿದ್ದು ನಿಜಕ್ಕೂ ದುಃಖದ ಸಂಗತಿ.
ಪುನೀತ್ ರಾಜ್ಕುಮಾರ್ (Puneeth Rajkumar) ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಅವರ ಪತ್ನಿ ಅಶ್ವಿನಿ (Ashwini Puneeth) ಅವರಿಗೆ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಮಾಸುವ ಮೊದಲೇ ಅವರ ತಂದೆ ಭಾಗಮನೆ ರೇವನಾಥ್ (Bagmane Revanath) ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಭಾನುವಾರ ಬೆಳಗ್ಗೆ ವಾಕ್ ಮಾಡುವಾಗ ರೇವನಾಥ್ ಕುಸಿದು ಬಿದ್ದಿದ್ದರು. ನಂತರ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಶಿವರಾಜ್ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಸ್ಥಿತಿ ಕಂಡು ಅಭಿಮಾನಿಗಳು ಮರುಗುತ್ತಿದ್ದಾರೆ. ಕೆಲವೇ ತಿಂಗಳ ಅಂತರದಲ್ಲಿ ಪತಿ ಮತ್ತು ತಂದೆಯನ್ನು ಅವರು ಕಳೆದುಕೊಳ್ಳುವಂತಾಗಿದ್ದು ನಿಜಕ್ಕೂ ದುಃಖದ ಸಂಗತಿ.
ಇದನ್ನೂ ಓದಿ: ಪುನೀತ್-ರಾಜೇಶ್ ಕೊನೇ ಭೇಟಿಯ ಕ್ಷಣಗಳು; ಅಗಲಿದ ಸಾಧಕರಿಗೆ ಇದು ಚಿತ್ರನಮನ
ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ