ಚಿಕ್ಕಮಗಳೂರು ಉತ್ಸವದಲ್ಲಿ ಅಶ್ವಿನಿ ಪುನೀತ್​ಗೆ ಸನ್ಮಾನ

ಚಿಕ್ಕಮಗಳೂರು ಉತ್ಸವದಲ್ಲಿ ಅಶ್ವಿನಿ ಪುನೀತ್​ಗೆ ಸನ್ಮಾನ

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 19, 2023 | 8:59 AM

ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ರಾಜ್​ಕುಮಾರ್​ಗೆ ಸನ್ಮಾನ ಮಾಡಲಾಗಿದೆ.

ಚಿಕ್ಕಮಗಳೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ ನೀಡಿದ್ದಾರೆ. 5 ದಿನಗಳ ಕಾಲ ಈ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ರಾಜ್​ಕುಮಾರ್​ಗೆ ಸನ್ಮಾನ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಚಿವ ಸುನೀಲ್ ಕುಮಾರ್, ಶಾಸಕ ಎಂ.ಪಿ. ಕುಮಾರಸ್ವಾಮಿ ಮೊದಲಾದವರು ಹಾಜರಿದ್ದರು. ಸುಭಾಷ್​ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಈ ಉತ್ಸವ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 19, 2023 08:58 AM