ಕೆಆರ್​ ಪೇಟೆಯಲ್ಲಿ ಅಪ್ಪು ಪ್ರಥಿಮೆ ಅನಾವರಣ ಮಾಡಿದ ಅಶ್ವಿನಿ ಪುನೀತ್

Updated on: Oct 03, 2023 | 8:27 AM

ಕೆಆರ್ ಪೇಟೆಯ ಬೊಮ್ಮೇಗೌಡ ವೃತ್ತದಲ್ಲಿ ಅಪ್ಪು ಪುತ್ಥಳಿ ನಿರ್ಮಾಣ ಮಾಡಲಾಗಿದೆ. 8 ಅಡಿ ಎತ್ತರದ ಈ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅನಾವರಣ ಮಾಡಿದ್ದಾರೆ. ಅಭಿಮಾನಿಗಳು ಅಶ್ವಿನಿ ಪುನೀತ್ ರಾಜಕುಮಾರ್ಅ ವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಕೆಆರ್ ಪೇಟೆಯ ಬೊಮ್ಮೇಗೌಡ ವೃತ್ತದಲ್ಲಿ ಅಪ್ಪು ಪುತ್ಥಳಿ ನಿರ್ಮಾಣ ಮಾಡಲಾಗಿದೆ. 8 ಅಡಿ ಎತ್ತರದ ಈ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅನಾವರಣ ಮಾಡಿದ್ದಾರೆ. ಅಭಿಮಾನಿಗಳು ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth) ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಪಟಾಕಿ ಸಿಡಿಸಿ, ಹೂವಿನ ಮಳೆ ಸುರಿದು ಅಪ್ಪು ಘೋಷಣೆಯೊಂದಿಗೆ ಅವರನ್ನು ಸ್ವಾಗತಿಸಲಾಯಿತು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್ ಪೇಟೆ, ಮನೋಹರ ಗೌಡ, ಮಂಡ್ಯ ರವಿ ಸೇರಿ ಸಾವಿರಾರು ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More