Ashwini Puneeth Rajkumar: ಡಿಸಿಎಂ ಡಿಕೆ ಶಿವಕುಮಾರ್​ ನಿವಾಸಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​, ರಾಘಣ್ಣ

|

Updated on: Jun 10, 2023 | 12:09 PM

DK Shivakumar: ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ. ಸದಾಶಿವನಗರದಲ್ಲಿ ಇರುವ ಡಿಕೆಶಿ ನಿವಾಸದಲ್ಲಿ ಈ ಭೇಟಿ ನಡೆದಿದೆ.

ಡಾ. ರಾಜ್​ಕುಮಾರ್​ ಕುಟುಂಬದ ಜೊತೆ ಅನೇಕ ರಾಜಕೀಯ ಗಣ್ಯರು ನಂಟು ಹೊಂದಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪರವಾಗಿ ದೊಡ್ಮನೆ ಸೆಲೆಬ್ರಿಟಿಗಳು ಪ್ರಚಾರ ಮಾಡಿದ್ದರು. ಇಂದು (ಜೂನ್​ 10) ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ. ಸದಾಶಿವನಗರದಲ್ಲಿ ಇರುವ ಡಿಕೆಶಿ (DK Shivakumar) ನಿವಾಸದಲ್ಲಿ ಈ ಭೇಟಿ ನಡೆದಿದೆ. ಡಿಸಿಎಂ ಅವರ ನಿವಾಸಕ್ಕೆ ಅಶ್ವಿನಿ ಎಂಟ್ರಿ ನೀಡಿದ ವಿಡಿಯೋ ಕೂಡ ಲಭ್ಯವಾಗಿದೆ. ನಟ ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಅವರು ಸಹ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on