ಡಾ. ರಾಜ್ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಏಪ್ರಿಲ್ 24 ಎಂದರೆ ಡಾ. ರಾಜ್ಕುಮಾರ್ ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ಕುಮಾರ್ ಕೂಡ ಬಂದು ಪೂಜೆ ಮಾಡಿದ್ದಾರೆ.
ಏಪ್ರಿಲ್ 24 ಎಂದರೆ ಡಾ. ರಾಜ್ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್ಕುಮಾರ್, ಯುವ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್ಕುಮಾರ್ ಅವರು ಮಾತನಾಡಿದರು. ‘ಪ್ರತಿ ವರ್ಷದಂತೆ ಈ ವರ್ಷ ಕೂಡ ಸಾಕಷ್ಟು ಜನರು ಬಂದಿದ್ದಾರೆ. ಇವರಿಗೆ ಅಭಿಮಾನಿ ದೇವರುಗಳು ಅಂತ ಹೇಳದೇ ಇನ್ನೇನು ಹೇಳೋದು. ಅಭಿಮಾನಿಗಳಿಗೆ ಒಳ್ಳೆಯದಾಗಲಿ’ ಎಂದು ರಾಘವೇಂದ್ರ ರಾಜ್ಕುಮಾರ್ ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

