ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್

Updated on: Apr 24, 2026 | 7:33 PM

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್​ಕುಮಾರ್ ಕೂಡ ಬಂದು ಪೂಜೆ ಮಾಡಿದ್ದಾರೆ.

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ‘ಪ್ರತಿ ವರ್ಷದಂತೆ ಈ ವರ್ಷ ಕೂಡ ಸಾಕಷ್ಟು ಜನರು ಬಂದಿದ್ದಾರೆ. ಇವರಿಗೆ ಅಭಿಮಾನಿ ದೇವರುಗಳು ಅಂತ ಹೇಳದೇ ಇನ್ನೇನು ಹೇಳೋದು. ಅಭಿಮಾನಿಗಳಿಗೆ ಒಳ್ಳೆಯದಾಗಲಿ’ ಎಂದು ರಾಘವೇಂದ್ರ ರಾಜ್​ಕುಮಾರ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More