‘ಕೆರೆಬೇಟೆ’ ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಅಶ್ವಿನಿ ಪುನೀತ್ ರಾಜ್ಕುಮಾರ್
Kerebete: ಭಿನ್ನ ಕತೆ, ನಿರೂಪಣೆ, ವಿಷಯ ವಸ್ತುವಿನಿಂದ ಗಮನ ಸೆಳೆಯುತ್ತಿರುವ ‘ಕೆರೆ ಬೇಟೆ’ ಸಿನಿಮಾಕ್ಕೆ ಹಲವು ಸೆಲೆಬ್ರಿಟಿಗಳು ಬೆಂಬಲ ನೀಡಿದ್ದಾರೆ. ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಸಿನಿಮಾದ ಹಾಡು ಬಿಡುಗಡೆ ಮಾಡಿ ಸಿನಿಮಾಕ್ಕೆ ಶುಭ ಕೋರಿದ್ದಾರೆ.
‘ಕೆರೆಬೇಟೆ’ (Kere Bete) ಸಿನಿಮಾ ಚಿತ್ರೀಕರಣದ ಹಂತದಿಂದಲೂ ಗಮನ ಸೆಳೆಯುತ್ತಲೇ ಇದೆ. ಟ್ರೈಲರ್ ಬಿಡುಗಡೆ ಬಳಿಕವಂತೂ ಸಿನಿಮಾದ ಬಗ್ಗೆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಮಲೆನಾಡ ಹಳ್ಳಿಯ ಕತೆಯನ್ನು ಹೊಂದಿರುವ ಈ ಸಿನಿಮಾದ ಬಿಡುಗಡೆ ಸನಿಹವಾಗಿದ್ದು, ಇದೀಗ ಸಿನಿಮಾದ ಹಾಡು ಬಿಡುಗಡೆ ಆಗಿದೆ. ಸಿನಿಮಾಕ್ಕೆ ಈಗಾಗಲೇ ಕನ್ನಡ ಚಿತ್ರರಂಗದ ದೊಡ್ಡ ಸೆಲೆಬ್ರಿಟಿಗಳು ಬೆಂಬಲ ನೀಡಿದ್ದಾರೆ. ಇತ್ತೀಚೆಗಷ್ಟೆ ನಟ ಕಿಚ್ಚ ಸುದೀಪ್ (Kichcha Sudeep), ಸಿನಿಮಾದ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ‘ಕೆರೆ ಬೇಟೆ’ ಸಿನಿಮಾದ ಹಾಡು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

