‘ಕೆರೆಬೇಟೆ’ ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಅಶ್ವಿನಿ ಪುನೀತ್ ರಾಜ್​ಕುಮಾರ್

Updated on: Mar 09, 2024 | 9:28 PM

Kerebete: ಭಿನ್ನ ಕತೆ, ನಿರೂಪಣೆ, ವಿಷಯ ವಸ್ತುವಿನಿಂದ ಗಮನ ಸೆಳೆಯುತ್ತಿರುವ ‘ಕೆರೆ ಬೇಟೆ’ ಸಿನಿಮಾಕ್ಕೆ ಹಲವು ಸೆಲೆಬ್ರಿಟಿಗಳು ಬೆಂಬಲ ನೀಡಿದ್ದಾರೆ. ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಸಿನಿಮಾದ ಹಾಡು ಬಿಡುಗಡೆ ಮಾಡಿ ಸಿನಿಮಾಕ್ಕೆ ಶುಭ ಕೋರಿದ್ದಾರೆ.

‘ಕೆರೆಬೇಟೆ’ (Kere Bete) ಸಿನಿಮಾ ಚಿತ್ರೀಕರಣದ ಹಂತದಿಂದಲೂ ಗಮನ ಸೆಳೆಯುತ್ತಲೇ ಇದೆ. ಟ್ರೈಲರ್ ಬಿಡುಗಡೆ ಬಳಿಕವಂತೂ ಸಿನಿಮಾದ ಬಗ್ಗೆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಮಲೆನಾಡ ಹಳ್ಳಿಯ ಕತೆಯನ್ನು ಹೊಂದಿರುವ ಈ ಸಿನಿಮಾದ ಬಿಡುಗಡೆ ಸನಿಹವಾಗಿದ್ದು, ಇದೀಗ ಸಿನಿಮಾದ ಹಾಡು ಬಿಡುಗಡೆ ಆಗಿದೆ. ಸಿನಿಮಾಕ್ಕೆ ಈಗಾಗಲೇ ಕನ್ನಡ ಚಿತ್ರರಂಗದ ದೊಡ್ಡ ಸೆಲೆಬ್ರಿಟಿಗಳು ಬೆಂಬಲ ನೀಡಿದ್ದಾರೆ. ಇತ್ತೀಚೆಗಷ್ಟೆ ನಟ ಕಿಚ್ಚ ಸುದೀಪ್ (Kichcha Sudeep), ಸಿನಿಮಾದ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ‘ಕೆರೆ ಬೇಟೆ’ ಸಿನಿಮಾದ ಹಾಡು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More